Biblica® Open Kannada Contemporary Version 2022
ಎಸ್ತೇರಳು 10
ಮೊರ್ದೆಕೈ ಶ್ರೇಷ್ಠತೆ
ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು. ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ. ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.
Biblica® Open Kannada Contemporary Version 2022. Copyright © Biblica, Inc. Licensed under CC BY-SA 4.0. Source: Open.Bible. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-11-09.