Skip to content
BibleKenya

Biblica® Open Kannada Contemporary Version 2022

ಯೆರೆಮೀಯ 47

ಫಿಲಿಷ್ಟಿಯರನ್ನು ಕುರಿತು ಸಂದೇಶ

ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:

ಯೆಹೋವ ದೇವರು ಹೀಗೆ ಹೇಳುತ್ತಾರೆ:

“ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ,

ಅದು ತುಂಬಿ ತುಳುಕುವ ಪ್ರಳಯವಾಗುವುದು;

ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ,

ಅದರ ನಿವಾಸಿಗಳನ್ನೂ ಆಕ್ರಮಿಸುವುವು;

ಆಗ ಮನುಷ್ಯರು ಕೂಗುವರು;

ದೇಶದ ನಿವಾಸಿಗಳೆಲ್ಲರು ಗೋಳಾಡುವರು.

ಅವನ ಬಲವಾದ ಕುದುರೆಗಳ ಗೊರಸುಗಳ

ತುಳಿಯುವಿಕೆಯ ಶಬ್ದದಿಂದಲೂ

ಅವನ ರಥಗಳ ಘೋಷದಿಂದಲೂ

ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ

ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.

ಏಕೆಂದರೆ ಫಿಲಿಷ್ಟಿಯರೆಲ್ಲರನ್ನು

ಸೂರೆ ಮಾಡುವುದಕ್ಕೂ ಟೈರಿನಿಂದಲೂ

ಸೀದೋನಿನಿಂದಲೂ ಉಳಿದವರನ್ನು

ಕಡಿದುಬಿಡುವುದಕ್ಕೂ ಆ ದಿವಸ ಬಂತು.

ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು

ಕಫ್ತೋರಿನ1 ದೇಶದ ಉಳಿದವರನ್ನೂ ಸೂರೆಮಾಡುವನು.

ಗಾಜಾ ಊರು ಬೋಳಿಸಿಕೊಂಡಿದೆ.

ಅಷ್ಕೆಲೋನ್ ನಾಶನ ಹೊಂದಿದೆ.

ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ

ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?

“ಅಯ್ಯೋ, ಯೆಹೋವ ದೇವರ ಖಡ್ಗವೇ,

ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ?

ನಿನ್ನ ಒರೆಯಲ್ಲಿ ಅಡಗಿಕೋ;

ವಿಶ್ರಮಿಸಿಕೋ, ಸುಮ್ಮನಿರು.

ಅದು ಹೇಗೆ ಸುಮ್ಮನಿರುವುದು?

ಅಷ್ಕೆಲೋನಿಗೆ ವಿರೋಧವಾಗಿ ಮತ್ತು

ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ?

ಅಲ್ಲಿ ಅದನ್ನು ನೇಮಿಸಿದ್ದಾನೆ.”

Source notes (1)
  1. Footnote ಅದು, ಕ್ರೇತ

Biblica® Open Kannada Contemporary Version 2022. Copyright © Biblica, Inc. Licensed under CC BY-SA 4.0. Source: Open.Bible. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-11-09.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.