Skip to content
BibleKenya

Biblica® Open Kannada Contemporary Version 2022

ಕೀರ್ತನೆಗಳು 122

ದಾವೀದನ ಯಾತ್ರಾ ಗೀತೆ.

“ಯೆಹೋವ ದೇವರ ಆಲಯಕ್ಕೆ ಹೋಗೋಣ,”

ಎಂದು ಜನರು ನನ್ನನ್ನು ಕರೆದಾಗ,

ನನಗೆ ಸಂತೋಷವಾಯಿತು.

ಯೆರೂಸಲೇಮೇ, ನಮ್ಮ ಪಾದಗಳು

ನಿನ್ನ ಬಾಗಿಲುಗಳಲ್ಲಿ ತಲುಪಿದೆ.

ಯೆರೂಸಲೇಮು, ಗಂಭೀರವಾಗಿಯೂ

ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.

ಅಲ್ಲಿಗೆ ಗೋತ್ರಗಳು,

ಯೆಹೋವ ದೇವರು

ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ

ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.

ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ,

ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.

ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ.

“ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.

ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ,

ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”

ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ

“ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.

ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ

ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.

Biblica® Open Kannada Contemporary Version 2022. Copyright © Biblica, Inc. Licensed under CC BY-SA 4.0. Source: Open.Bible. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-11-09.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.