Biblica® Open Kannada Contemporary Version 2022
ಕೀರ್ತನೆಗಳು 130
ಯಾತ್ರಾ ಗೀತೆ.
ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.
ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ.
ನನ್ನ ಕೂಗಿಗೆ ಕರುಣೆ ತೋರಿಸಿ,
ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.
ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ,
ನಿಮ್ಮ ಮುಂದೆ ಯಾರು ನಿಲ್ಲುವರು?
ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು.
ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.
ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ;
ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ.
ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ
ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.
ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ,
ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ,
ಸಂಪೂರ್ಣ ವಿಮೋಚನೆಯೂ ಇರುತ್ತದೆ.
ದೇವರು ಇಸ್ರಾಯೇಲನ್ನು ಅವರ
ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.
Biblica® Open Kannada Contemporary Version 2022. Copyright © Biblica, Inc. Licensed under CC BY-SA 4.0. Source: Open.Bible. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-11-09.