Biblica® Open Kannada Contemporary Version 2022
ಕೀರ್ತನೆಗಳು 67
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕ ಕೀರ್ತನೆ, ಒಂದು ಗೀತೆ.
ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ.
ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.
ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು.
ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.
ದೇವರೇ, ಜನರು ನಿಮ್ಮನ್ನು ಕೊಂಡಾಡಲಿ,
ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.
ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ.
ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ,
ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.
ದೇವರೇ, ಜನರು ನಿಮ್ಮನ್ನು ಕೊಂಡಾಡಲಿ.
ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.
ಭೂಮಿಯು ತನ್ನ ಬೆಳೆಯನ್ನು ಕೊಡುವುದು.
ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು.
ದೇವರು ನಮ್ಮನ್ನು ಆಶೀರ್ವದಿಸುವರು.
ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.
Biblica® Open Kannada Contemporary Version 2022. Copyright © Biblica, Inc. Licensed under CC BY-SA 4.0. Source: Open.Bible. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-11-09.