Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪೂರ್ವ 27

ಸೈನಿಕರ ವರ್ಗಗಳು

ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ:

ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು. ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು. ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ. ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ. ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು. ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ. ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

ಕುಲ ಪ್ರಭುಗಳು

ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು; ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್; ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ; ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್; ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್; ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್; ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.

ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ. ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.

ಅರಸನ ಆಸ್ತಿಯ ಮೇಲ್ವಿಚಾರಕರು

ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು, ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ, ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ, ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್, ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು, ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ, ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.

ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು. ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅವನ ಮಿತ್ರನಾಗಿದ್ದನು. ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.