Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೊರಿ 10

ಕ್ರೈಸ್ತರ ಎಚ್ಚರಿಕೆಗಾಗಿ ಪೌಲನು ಇಸ್ರಾಯೇಲ್ಯರ ದೃಷ್ಟಾಂತವನ್ನು ಸೂಚಿಸಿದ್ದು

ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ 1ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು. 2ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು. ಅವರೆಲ್ಲರೂ 3ಆತ್ಮೀಕವಾದ 4ಒಂದೇ ಆಹಾರವನ್ನು ತಿಂದರು. 5ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ. ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. 6ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು. 7ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, 8“ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. 9ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ. 10ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. 11ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ. 12ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ. 13ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು 14ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. 15ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ. ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. 16ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ 17ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಕ್ರಿಸ್ತ ಸೇವೆಗೂ ವಿಗ್ರಹಾರಾಧನೆಗೂ ಸಂಬಂಧವೇನೂ ಇರಬಾರದೆಂಬ ಬೋಧನೆ

ಆದ್ದರಿಂದ ಪ್ರಿಯರೇ, 18ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ. ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ. 19ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? 20ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು 21ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ. ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. 22ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ. ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು 23ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ, ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, 24ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ. 25ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ. 26ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದು

27

“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ. 28ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ. 29ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ. 30“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.” ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ. ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ. 31ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. 32ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು? ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ 33ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ. ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ. ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.

Source notes (33)
  1. Footnote ವಿಮೋ 13:21
  2. Footnote ವಿಮೋ 14:22
  3. Footnote ಯೋಹಾ 6:31
  4. Footnote ವಿಮೋ 16:15,35
  5. Footnote ವಿಮೋ 17:6
  6. Footnote ಅರಣ್ಯ 14:16,19
  7. Footnote ಅರಣ್ಯ 11:4,33; ಕೀರ್ತ 106:14
  8. Footnote ವಿಮೋ 32:6
  9. Footnote 1 ಕೊರಿ 10:14
  10. Footnote ಅರಣ್ಯ 25:1-9
  11. Footnote 1 ಕೊರಿ 6:18
  12. Footnote ಅರಣ್ಯ 21:5,6
  13. Footnote ಅರಣ್ಯ 14:2, 29-37
  14. Footnote ರೋಮಾ. 4:23,24
  15. Footnote ರೋಮಾ. 11:20
  16. Footnote 1 ಕೊರಿ 1:9
  17. Footnote 2 ಪೇತ್ರ. 2:9
  18. Footnote 1 ಕೊರಿ 10:7
  19. Footnote ಮತ್ತಾ 26:27,28
  20. Footnote ಮತ್ತಾ 26:27; 1 ಕೊರಿ 11:23,24
  21. Footnote 1 ಕೊರಿ 12:12,13; ರೋಮಾ. 12:5; ಕೊಲೊ 3:15
  22. Footnote ಯಾಜ 3:7,15
  23. Footnote ಅಥವಾ ವಿಶೇಷ
  24. Footnote ಧರ್ಮೋ 32:17, ಕೀರ್ತ 106:37
  25. Footnote 2 ಕೊರಿ 6:15,16
  26. Footnote ಧರ್ಮೋ 32:21
  27. Footnote 1 ಕೊರಿ 6:18; 8:9
  28. Footnote ವ 33 ನೋಡಿರಿ
  29. Footnote 1 ಕೊರಿ 8:7:
  30. Footnote ಕೀರ್ತ 24:1; ಕೀರ್ತ 50:12
  31. Footnote 1 ಕೊರಿ 8:9-12:
  32. Footnote ರೋಮಾ. 14:16:
  33. Footnote 1 ಕೊರಿ 9:22:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.