Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೊರಿ 3

ಆದರೆ ಸಹೋದರರೇ ನಾನಂತೂ 1ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ 2ಪ್ರಾಪಂಚಿಕರೂ 3ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು. 4ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ. ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. 5ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ? 6ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?

ಸುವಾರ್ತೆಯನ್ನು ಸಾರುವವರು ದೇವರ ಕೈಯಲ್ಲಿ ಬರೀ ಸಾಧನಗಳಷ್ಟೆ, ಕಾರ್ಯಕರ್ತನು ದೇವರೇ

ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ 7ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ 8ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ. 9ನಾನು ಸಸಿಯನ್ನು ನೆಟ್ಟೆನು. 10ಅಪೊಲ್ಲೋಸನು ನೀರನ್ನು ಹೊಯ್ಯಿದನು. 11ಆದರೆ ಅದನ್ನು ಬೆಳೆಸಿದವನು ದೇವರೇ. ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು. ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. 12ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು. 13ನಾವು ದೇವರ ಜೊತೆಕೆಲಸದವರು. ನೀವು 14ದೇವರ ಹೊಲವೂ. 15ದೇವರ ಮಂದಿರವೂ ಆಗಿದ್ದೀರಿ. 16

ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ 17ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು. 18 ಯೇಸು ಕ್ರಿಸ್ತನೆಂಬ 19 ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, 20ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು 21ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ 22ಅವನಿಗೆ ಪ್ರತಿಫಲ ಸಿಕ್ಕುವುದು. ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ 23ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. 24

ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ 25ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” ಯಾಕೆಂದರೆ 26ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. 27“ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,” 28“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ ಆದಕಾರಣ 29ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ 30ಸಮಸ್ತವೂ ನಿಮಗಾಗಿಯೇ ಇದೆ. ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ. 31ನೀವಂತೂ ಕ್ರಿಸ್ತನವರು, 32ಕ್ರಿಸ್ತನು ದೇವರಿನವನು.

Source notes (32)
  1. Footnote 1 ಕೊರಿ 2:15:
  2. Footnote 1 ಕೊರಿ 2:14:
  3. Footnote ಇಬ್ರಿ. 5:13.
  4. Footnote ಇಬ್ರಿ. 5:1. ಯೋಹಾ 16:12:
  5. Footnote 1 ಕೊರಿ 1:11; 11:18; ಗಲಾ. 5:19, 20.
  6. Footnote 1 ಕೊರಿ 1:12.
  7. Footnote 2 ಕೊರಿ 6:4; ಎಫೆ 3:7; ಕೊಲೊ 5:21:
  8. Footnote ರೋಮಾ 12:6:
  9. Footnote 1 ಕೊರಿ 4:15; 9:1; 15:1; ಅ. ಕೃ. 18:4-11; 2 ಕೊರಿ 10:14, 15:
  10. Footnote ಅ. ಕೃ. 18:27:
  11. Footnote 1 ಕೊರಿ 15:10.
  12. Footnote ವ. 14; 1 ಕೊರಿ 15:15,58.
  13. Footnote ಮಾರ್ಕ 16:20; 2 ಕೊರಿ 6:1.
  14. Footnote ಅಥವಾ, ದೇವರ ಸಾಗುವಳಿಯೂ.
  15. Footnote ಎಫೆ 2:20-22; ಕೊಲೆ. 2:7; 1 ಪೇತ್ರ 2:5. ವ. 16:
  16. Footnote ಅಥವಾ. ದೇವರು ನನಗೆ ಅನುಗ್ರಹಿಸಿದ ಕೃಪೆಯನ್ನವಲಂಬಿಸಿ.
  17. Footnote ವ. 11, 12; ರೋಮಾ. 15:20:
  18. Footnote ಎಫೆ 2:20.
  19. Footnote 2 ಕೊರಿ 11:4; ಗಲಾ. 1:6, 7. ಯೆಶಾ 28:16.
  20. Footnote 1 ಕೊರಿ 4:5.
  21. Footnote 2 ಥೆಸ. 1:17.
  22. Footnote 1 ಕೊರಿ 15:58.
  23. Footnote ಯೂದ. 23.
  24. Footnote 1 ಕೊರಿ 6:19; 2 ಕೊರಿ 6:16; ಎಫೆ 2:21:
  25. Footnote 1 ಕೊರಿ 8:2:
  26. Footnote 1 ಕೊರಿ 1:20:
  27. Footnote ಯೋಬ. 5:13:
  28. Footnote ಕೀರ್ತ 94:11:
  29. Footnote 1 ಕೊರಿ 3:4-6; 1:12; 4:6.
  30. Footnote ರೋಮಾ. 8:28.
  31. Footnote 2 ಕೊರಿ 10:7. ಗಲಾ. 3:29.
  32. Footnote 1 ಕೊರಿ 11:3.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.