Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೊರಿ 9

ಅಪೊಸ್ತಲರ ಅಧಿಕಾರ

ನಾನು ಸ್ವತಂತ್ರನಲ್ಲವೋ? ನಾನು 1ಅಪೊಸ್ತಲನಲ್ಲವೋ? 2ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? 3ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ? ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ. ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ, ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ? ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ 4ಸಹೋದರರಂತೆಯ, ಮತ್ತು 5ಕೇಫನಂತೆಯೂ ನಮಗೆ ಹಕ್ಕಿಲ್ಲವೇ? ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ? 6ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? 7ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ? ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ? 8“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ? ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, 9ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು. 10ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ? ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? 11ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು. 12ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ? ಅದೇ ರೀತಿಯಾಗಿ ಕರ್ತನು ಸಹ 13ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ. 14

ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು. ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; 15ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ! ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ 16ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ. ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು 17ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.

ನಾನು ಎಲ್ಲಾ ವಿಷಯಗಳಲ್ಲಿ 18ಸ್ವತಂತ್ರನಾಗಿದ್ದರೂ 19ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು 20ನಾನು ಎಲ್ಲರಿಗೂ ದಾಸನಾದೆನು. ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ 21ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು. ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ 22ಧರ್ಮಶಾಸ್ತ್ರ ಬಾಹಿರನಂತಾದೆನು. 23ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು 24ಎಲ್ಲರಿಗೂ ಎಲ್ಲರಂತಾದೆನು. ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ.

ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ 25ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; 26ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಬೋಧಿಸಿದ ಮೇಲೆ ನಾನೇ 27ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ 28ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

Source notes (28)
  1. Footnote ಅ. ಕೃ. 14:14; 2 ಕೊರಿ 12:12; 1 ಥೆಸ. 2:6; 1 ತಿಮೊ. 2:7
  2. Footnote 1 ಕೊರಿ 15:8; ಅ. ಕೃ. 9:17; 18:9; 22:18; 23:11
  3. Footnote 1 ಕೊರಿ 3:6
  4. Footnote ಮತ್ತಾ 12:46; 13:55; ಮಾರ್ಕ 6:3; ಯೋಹಾ 7:3,5,10; ಅ. ಕೃ. 1:14; ಗಲಾ. 1:19
  5. Footnote ಮತ್ತಾ 8:14
  6. Footnote 1 ತಿಮೊ. 1:18; 2 ತಿಮೊ. 2:3,4.
  7. Footnote 1 ಕೊರಿ 3:6-8; ಧರ್ಮೋ 20:6; ಜ್ಞಾ. 27:18
  8. Footnote ಧರ್ಮೋ 25:4; 1 ತಿಮೊ. 5:18
  9. Footnote ರೋಮಾ. 3:24
  10. Footnote ರೋಮಾ. 15:27; ಗಲಾ. 6:6
  11. Footnote 1 ಕೊರಿ 9:15,18; ಅ. ಕೃ. 20:33,34
  12. Footnote ಯಾಜ 6:16,26; ಅರಣ್ಯ 5:9,10; ಧರ್ಮೋ 18:1
  13. Footnote 1 ಕೊರಿ 9:4; ಮತ್ತಾ 10:10; ಲೂಕ 10:7
  14. Footnote ಅ. ಕೃ. 18:3
  15. Footnote ಅ. ಕೃ. 4:20; ರೋಮಾ. 1:14
  16. Footnote 1 ಕೊರಿ 4:1; ಗಲಾ. 2:7
  17. Footnote 2 ಕೊರಿ 11:7; 12:13
  18. Footnote ವ. 1-23
  19. Footnote ಮತ್ತಾ 18:15; 1 ಪೇತ್ರ 3:1
  20. Footnote 2 ಕೊರಿ 4:5
  21. Footnote ಅ. ಕೃ. 16:3; 18:18; 21:23-26
  22. Footnote ರೋಮಾ. 14:1-23
  23. Footnote 2 ಕೊರಿ 11:29
  24. Footnote 1 ಕೊರಿ 10:33
  25. Footnote ಗಲಾ. 2:2; 5:7; ಫಿಲಿ. 2:16; ಇಬ್ರಿ. 12:1
  26. Footnote ಯಾಕೋಬ 1:12
  27. Footnote ಇಬ್ರಿ. 6:8
  28. Footnote ರೋಮಾ. 6:19

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.