ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
1 ಪೇತ್ರ 1
ಪೀಠಿಕೆ
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ 1ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ, 2ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, 3ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, 4ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ 5ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. 7ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, 8ತನ್ನ ಮಹಾ ಕರುಣಾನುಸಾರವಾಗಿ 9ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, ನಮ್ಮನ್ನು ಲಯ, ಕಳಂಕ, 10ನಾಶಗಳಿಲ್ಲದ 11ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ 12ಪರಲೋಕದಲ್ಲಿ ಇಡಲ್ಪಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ 13ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ. ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ 14ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. ನಾಶವಾಗುವಂತಹದ್ದೂ, 15ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ 16ಶೋಧಿತವಾಗಿ 17ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. 18ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. 19ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ 20ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ 21ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 22ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ 23ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ 24ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು 25ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ಪರಿಶುದ್ಧ ಜೀವಿತಕ್ಕೆ ಆಹ್ವಾನ
ಆದ್ದರಿಂದ 26ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, 27ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, 28ನೀವು ಮೊದಲು ಅಜ್ಞಾನಿಗಳಾಗಿದ್ದಾಗ 29ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, 30ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, 31“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. 32
ಪ್ರತಿಯೊಬ್ಬನ ನಡತೆಯನ್ನು ನೋಡಿ 33ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ 34ನಡವಳಿಕೆಗಳಿಂದ 35ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. ಯೇಸು ಕ್ರಿಸ್ತನೆಂಬ 36ನಿಷ್ಕಳಂಕವೂ, ನಿರ್ಮಲವೂ ಆದ 37ಕುರಿಮರಿಯ 38ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. 39ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ 40ಅಂತ್ಯಕಾಲಗಳಲ್ಲಿ ನಿಮಗಾಗಿ 41ಪ್ರತ್ಯಕ್ಷನಾದನು. 42ಆತನನ್ನು ಸತ್ತವರೊಳಗಿಂದ ಎಬ್ಬಿಸಿ 43ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ 44ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. ಏಕೆಂದರೆ 45ನೀವು ಹೊಸದಾಗಿ ಹುಟ್ಟಿರುವಂಥದ್ದು 46ನಾಶವಾಗುವ 47ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ 48ವಾಕ್ಯದಿಂದಲೇ. ಅದು 49ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: 50
“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
ಆದರೆ 51ಕರ್ತನ ಮಾತೋ ಸದಾಕಾಲವೂ ಇರುವುದು.”
ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ 52ಸುವಾರ್ತಾವಾಕ್ಯವೇ.
Source notes (52)
- Footnote ಯಾಕೋಬ. 1:1.
- Footnote 1 ಥೆಸ. 4:3
- Footnote ಇಬ್ರಿ. 10:22; 12:24:
- Footnote ಅ. ಕೃ. 2:23; ರೋಮಾ. 8:29; 11:2.
- Footnote 2 ಪೇತ್ರ. 1:2.
- Footnote 2 ಕೊರಿ 1:3; ಎಫೆ 1:3.
- Footnote 1 ಕೊರಿ 15:20; 1 ಪೇತ್ರ. 3:21.
- Footnote ತೀತ 3:5.
- Footnote ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23
- Footnote 1 ಪೇತ್ರ. 5:4:
- Footnote ರೋಮಾ. 8:17:
- Footnote ಕೊಲೊ 1:5; 2 ತಿಮೊ. 4:8:
- Footnote ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18:
- Footnote ಯಾಕೋಬ. 1:2; 1 ಪೇತ್ರ. 4:12:
- Footnote ಜ್ಞಾ. 17:3; 1 ಕೊರಿ 3:13:
- Footnote ಯಾಕೋಬ. 1:3:
- Footnote ರೋಮಾ. 2:7,10; 1 ಕೊರಿ 4:5:
- Footnote 1 ಯೋಹಾ 4:20:
- Footnote ಇಬ್ರಿ. 11:27; ಯೋಹಾ 20:29:
- Footnote ರೋಮಾ. 6:22:
- Footnote 2 ಪೇತ್ರ. 1:19; ಮತ್ತಾ 13:17; ಲೂಕ 10:24:
- Footnote ರೋಮಾ. 8:9; ಅ. ಕೃ. 16:7:
- Footnote ಯೆಶಾ 52:13-53; 1 ಕೊರಿ 15:3; ಮತ್ತಾ 13:17:
- Footnote ಇಬ್ರಿ. 11:39,40.
- Footnote ಅ. ಕೃ. 2:2-4:
- Footnote ಲೂಕ 12:35; ಎಫೆ 6:14:
- Footnote 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:
- Footnote ಅ. ಕೃ. 17:30.
- Footnote ರೋಮಾ. 12:2; ತೀತ. 3:3:
- Footnote 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:
- Footnote ಯಾಜ 11:44; 19:2:
- Footnote ಕೀರ್ತ 62:12:
- Footnote ಯಾಕೋಬ. 2:1:
- Footnote ಎಫೆ 4:17:
- Footnote ಕೀರ್ತ 49:8; 130. 8; 1 ಕೊರಿ 6:20; ತೀತ. 2:14:
- Footnote ವಿಮೋ 12:5; ಯಾಜ 22:20; ಇಬ್ರಿ. 9:14:
- Footnote ಯೋಹಾ 1:29:
- Footnote ಅ. ಕೃ. 20:28; ಎಫೆ 1:7; 1 ಯೋಹಾ 1:7:
- Footnote ಎಫೆ 3:11; ಪ್ರಕ 13:8;
- Footnote ಇಬ್ರಿ. 1:2:
- Footnote ರೋಮಾ. 16:26:
- Footnote ಅ. ಕೃ. 2:24; ರೋಮಾ. 10:9:
- Footnote ಅ. ಕೃ. 3:13; ಇಬ್ರಿ. 2:9:
- Footnote ರೋಮಾ. 12:9; ಇಬ್ರಿ. 13:1:
- Footnote ಯೋಹಾ 3:3; ಯಾಕೋಬ. 1:18:
- Footnote ಯೋಹಾ 1:13:
- Footnote ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
- Footnote ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
- Footnote ಇಬ್ರಿ. 4:12:
- Footnote ಯೆಶಾ 40. 6-8
- Footnote ಮತ್ತಾ 24:35:
- Footnote ಯೆಶಾ 40. 9:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.