Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪೇತ್ರ 3

ಸತಿಪತಿಯರು

ಅದೇ ರೀತಿಯಾಗಿ ಪತ್ನಿಯರೇ, 1ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ 2ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು. 3ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ 4ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ 5ಅಧೀನರಾಗಿದ್ದರು. ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು 6ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ 7ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ. 8

ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.

ನೀತಿಗಾಗಿ ಬಾಧೆಯನ್ನನುಭವಿಸುವುದು

ಕಡೆಗೆ 9ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, 10ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, 11ಕರುಣೆಯೂ, 12ದೀನಭಾವವೂ ಉಳ್ಳವರಾಗಿರಿ. 13ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ 14ಆಶೀರ್ವದಿಸಿರಿ. 15ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, 16

“ಜೀವವನ್ನು ಬಯಸುತ್ತಾ

ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು

ಕೆಟ್ಟದ್ದನ್ನು ನುಡಿಯದಂತೆ

ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.

ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ.

ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.

ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ

ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ.

ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”

ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ಒಂದು ವೇಳೆ ನೀವು 17ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. 18ಅವರ ಬೆದರಿಕೆಗೆ ಹೆದರಬೇಡಿರಿ, 19ಕಳವಳಪಡಬೇಡಿರಿ. ಆದರೆ 20ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ 21ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ. 22ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ 23ಆಗ ಕ್ರಿಸ್ತನಲ್ಲಿರುವ ನಿಮ್ಮ 24ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ. ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು 25ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ 26ಒಂದೇ ಸಾರಿ ಪಾಪನಿವಾರಣೆಗೋಸ್ಕರ 27ಬಾಧೆಪಟ್ಟು ಸತ್ತನು. 28ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು. 29ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಅಂದರೆ ಪೂರ್ವಕಾಲದಲ್ಲಿ 30ನೋಹನು ನಾವೆಯನ್ನು ಕಟ್ಟುತ್ತಿರಲು 31ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ 32ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು. ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು 33ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ 34ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ 35ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ. 36ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, 37ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

Source notes (37)
  1. Footnote ಆದಿ 3:16:
  2. Footnote 1 ಕೊರಿ 7:16:
  3. Footnote 1 ತಿಮೊ. 2:9; ಯೆಶಾ 3:18-23:
  4. Footnote ರೋಮಾ. 2:29:
  5. Footnote ಅಥವಾ, ಅಧೀನರಾಗಿದ್ದರು. ಸಾರಳು ಹಾಗೆಯೇ ಕರೆದಳು. ನೀವು ಒಳ್ಳೆಯದನ್ನು ಮಾಡುವವರಾಗಿ ಯಾವ ಭೀತಿಗೂ ಗಾಬರಿಪಡದೆ ಇದ್ದರೆ ನೀವು ಸಾರಳ ಕುಮಾರ್ತೆಯರೇ.
  6. Footnote ಆದಿ 18:12:
  7. Footnote ಜ್ಞಾ. 3:25:
  8. Footnote ಎಫೆ 5:25; ಕೊಲೊ 3:19:
  9. Footnote ರೋಮಾ. 12:16:
  10. Footnote ಇಬ್ರಿ. 13:1:
  11. Footnote ಎಫೆ 4:32:
  12. Footnote ಎಫೆ 4:2:
  13. Footnote 1 ಪೇತ್ರ. 2:23; ರೋಮಾ. 12:17:
  14. Footnote ಲೂಕ 6:28; ರೋಮಾ. 12:14; 1 ಕೊರಿ 4:12:
  15. Footnote 1 ಪೇತ್ರ. 2:21:
  16. Footnote ಕೀರ್ತ 34:12-16:
  17. Footnote 1 ಪೇತ್ರ. 2:19, 20; 4:14, 16; ಮತ್ತಾ 5:10:
  18. Footnote ಅಥವಾ, ಅವರು ಯಾವುದಕ್ಕೆ ಹೆದರುತ್ತಾರೋ ಅದಕ್ಕೆ ನೀವು ಹೆದರದೆ; ವ. 6; ಯೆಶಾ 8:12, 13; ಮತ್ತಾ 10:28:
  19. Footnote ಯೋಹಾ 14:1, 27:
  20. Footnote ಯೆಶಾ 8:13; 29:23:
  21. Footnote ಕೊಲೊ 4:6:
  22. Footnote ಇಬ್ರಿ. 13:18:
  23. Footnote 1 ಪೇತ್ರ. 2:12:
  24. Footnote 1 ಪೇತ್ರ. 2:20; 1 ಪೇತ್ರ. 4:15, 16:
  25. Footnote ರೋಮಾ. 5:2:
  26. Footnote ಇಬ್ರಿ. 9:26, 28:
  27. Footnote 1 ಪೇತ್ರ. 2:21; 4:1; ರೋಮಾ. 4:25:
  28. Footnote 1 ಪೇತ್ರ. 4:1; ಕೊಲೊ 1:22:
  29. Footnote ಅಥವಾ, ಇದಲ್ಲದೆ ಸೆರೆಯಲ್ಲಿರುವ ಆತ್ಮಗಳು ಪೂರ್ವದಲ್ಲಿ ನಂಬದೆ ಇದ್ದಾಗ, ಅಂದರೆ ನೋಹನು ಕಾದಿದ್ದಾಗ ಆತನು ಆತ್ಮ ಸ್ವರೂಪವಾಗಿಯೇ ಅವುಗಳ ಬಳಿಗೆ ಹೋಗಿ.
  30. Footnote ಇಬ್ರಿ. 11:7:
  31. Footnote ಆದಿ 6:3, 5, 13, 14:
  32. Footnote ಆದಿ 7:1,7,23; 8:18.
  33. Footnote 1 ಪೇತ್ರ. 1:3.
  34. Footnote ಮಾರ್ಕ 16:16; ಅ. ಕೃ. 16:33; ರೋಮಾ. 6:3-6; ತೀತ. 3:5.
  35. Footnote ಅಥವಾ. ಒಳ್ಳೆಯ ಮನಸ್ಸಾಕ್ಷಿಯಿಂದ.
  36. Footnote ಅ. ಕೃ. 2:33, 34; ರೋಮಾ. 8:34; ಎಫೆ 1:20; ಕೊಲೊ; 3:1; ಇಬ್ರಿ. 1:3:
  37. Footnote ರೋಮಾ. 8:38; 1 ಕೊರಿ 15:24; ಎಫೆ 1:21:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.