Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಥೆಸ 1

ಪೀಠಿಕೆ

ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ 1ಥೆಸಲೋನಿಕದ ಸಭೆಗೆ ಪೌಲ 2ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, 3ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

ಪೌಲನು ಥೆಸಲೋನಿಕದವರ ನಂಬಿಕೆಗಾಗಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ

ನಾವು 4ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, 5ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ 6ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, 7ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ. 8ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, 9ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು. ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ 10ಪವಿತ್ರಾತ್ಮದೊಡನೆಯೂ ಮತ್ತು 11ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ 12ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ. ಇದಲ್ಲದೆ 13ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ 14ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, 15ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ. ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.

ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ 16ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು 17ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ. ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು 18ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ ಮತ್ತು ಆತನು 19ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

Source notes (19)
  1. Footnote ಅ. ಕೃ. 17:1:
  2. Footnote ಅ. ಕೃ. 15:22; 2 ಕೊರಿ 1:19; 2 ಥೆಸ. 1:1; 1 ಪೇತ್ರ 5:12:
  3. Footnote ರೋಮಾ. 1:7; ಎಫೆ 1:2:
  4. Footnote 2 ಥೆಸ. 1:11; ಯೋಹಾ 6:29; ಗಲಾ. 5:6; ಯಾಕೋಬ 2:22:
  5. Footnote 2 ಥೆಸ. 1:3:
  6. Footnote ರೋಮಾ. 8:25; 15:4:
  7. Footnote ರೋಮಾ. 1:9; 2 ತಿಮೊ. 1:6:
  8. Footnote 2 ಥೆಸ. 2:15:
  9. Footnote 2 ಪೇತ್ರ 1:10:
  10. Footnote 2 ಕೊರಿ 6:6; 1 ಕೊರಿ 2:4:
  11. Footnote ಸಿದ್ಧಿಪೂರ್ವಕವಾಗಿಯೂ. ಕೊಲೊ 2:2:
  12. Footnote 1 ಥೆಸ. 2:10; 2 ಥೆಸ. 3:7; ಅ. ಕೃ. 20:18:
  13. Footnote ಅ. ಕೃ. 17:5-10:
  14. Footnote ಅ. ಕೃ. 13:52; ಗಲಾ. 5:22:
  15. Footnote 1 ಥೆಸ. 2:14; 2 ಥೆಸ. 3:7, 9; 1 ಕೊರಿ 4:16; 11:1:
  16. Footnote ರೋಮಾ. 10:18; 2 ಥೆಸ. 3:1:
  17. Footnote ರೋಮಾ. 1:8; 16:19; 2 ಥೆಸ. 1:4:
  18. Footnote 1 ಕೊರಿ 12:2; ಅ. ಕೃ. 14:15:
  19. Footnote ಅ. ಕೃ. 2:24:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.