ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
1 ಥೆಸ 2
ಪೌಲನು ಥೆಸಲೊನೀಕದಲ್ಲಿ ಮಾಡಿದ ಸೇವೆ
ಸಹೋದರರೇ, 1ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ, ನಮಗೆ 2ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ 3ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ. ಯಾಕೆಂದರೆ 4ನಮ್ಮ ಬೋಧನೆಯು 5ತಪ್ಪಾದದ್ದಲ್ಲ, 6ಅಶುದ್ಧವಾದದ್ದೂ ಅಲ್ಲ, 7ಮೋಸವೂ ಅಲ್ಲ. ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, 8ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ 9ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ 10ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ. ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು 11ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. 12ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಯೇಸು ಕ್ರಿಸ್ತನ 13ಅಪೊಸ್ತಲರಾಗಿರುವುದರಿಂದ 14ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, 15ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ. ಆದರೆ 16ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ. ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ 17ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು 18ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. 19ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ. ನಂಬುವವರಾದ ನಿಮ್ಮ ವಿಷಯದಲ್ಲಿ 20ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು 21ದೇವರೂ ಸಾಕ್ಷಿಗಳಾಗಿದ್ದೀರಿ. 22ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ, ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ 23ಕರೆಯುವ ದೇವರಿಗೆ ತಕ್ಕಹಾಗೆ 24ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು 25ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ 26ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. 27ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ. ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು28 ಅನುಸರಿಸುವವರಾಗಿದ್ದಿರಿ. 29ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು 30ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ. 31ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು 32ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. 33ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ 34ದೇವರ ಕೋಪವು ಅವರ ಮೇಲೆ ಬರುತ್ತದೆ.
ಪೌಲನು ಥೆಸಲೋನಿಕದವರನ್ನು ನೋಡುವುದಕ್ಕೆ ಆಸೆಪಟ್ಟದ್ದು
ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ 35ಹೃದಯದಲ್ಲಿ ಅಗಲದೆ 36ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು. ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ 37ಅಡ್ಡಿ ಮಾಡಿದನು. 38ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, 39ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? 40ನೀವೇ ಅಲ್ಲವೇ. ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ.
Source notes (40)
- Footnote ಅಥವಾ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂತಲೂ.
- Footnote ಅ. ಕೃ. 16:22-24:
- Footnote ಅ. ಕೃ. 17:2-9:
- Footnote 2 ಕೊರಿ 2:17:
- Footnote 2 ಥೆಸ. 2:11:
- Footnote 1 ಥೆಸ 4:7:
- Footnote 2 ಕೊರಿ 4:2:
- Footnote ಗಲಾ. 2:7:
- Footnote ಗಲಾ. 1:10:
- Footnote ಕೀರ್ತ 17:3; ರೋಮಾ. 8:27:
- Footnote ಅ. ಕೃ. 20:33:
- Footnote 1 ಥೆಸ. 2:10; ರೋಮಾ. 1:9:
- Footnote 1 ಕೊರಿ 9:1:
- Footnote ಅಥವಾ, ನಮ್ಮನ್ನು ಸಂರಕ್ಷಿಸಬೇಕಾದ ಹೊರೆಯನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ. 1 ಕೊರಿ 9:4; 2 ಥೆಸ. 3:9; 1 ಥೆಸ. 2:9; 2 ಕೊರಿ 11:9:
- Footnote 2 ಕೊರಿ 4:5; ಯೋಹಾ 5:41:
- Footnote ವ. 11:
- Footnote 2 ಕೊರಿ 12:15:
- Footnote ಅ. ಕೃ. 18:3:
- Footnote 2 ಥೆಸ. 3:8:
- Footnote 1 ಥೆಸ. 1:5
- Footnote ವ. 5 ನೋಡಿರಿ.
- Footnote ವ. 7:
- Footnote 1 ಥೆಸ. 5:24; 2 ಥೆಸ. 2:14; 1 ಪೇತ್ರ. 5:10:
- Footnote ಎಫೆ 4:1:
- Footnote ಗಲಾ. 4:14:
- Footnote 1 ಥೆಸ. 1:2, 3
- Footnote ಇಬ್ರಿ. 4:12:
- Footnote 1 ಥೆಸ. 1:6:
- Footnote ಇಬ್ರಿ. 10:33,34:
- Footnote 1 ಥೆಸ. 3:4; ಅ. ಕೃ. 17:5; 2 ಥೆಸ. 1:4,5:
- Footnote ಲೂಕ 24:20:
- Footnote ಯೆರೆ 2:30; ಮತ್ತಾ 23:29-34; 5:12:
- Footnote ಅ. ಕೃ 13:45, 50; 14:2, 19; 17:5, 13; 18:12; 22:21 22:
- Footnote 1 ಥೆಸ. 1:10:
- Footnote 1 ಕೊರಿ 5:3; ಕೊಲೊ 2:5:
- Footnote 1 ಥೆಸ. 3:10:
- Footnote ರೋಮಾ. 1:13; 15:22:
- Footnote 1 ಥೆಸ. 3:13; 4:15; 5:23; ಮತ್ತಾ 24:3; 1 ಕೊರಿ 15:23; 2 ಥೆಸ. 2:1,8; ಯಾಕೋಬ 5:7,8; 2 ಪೇತ್ರ 1:16; 3:4, 12; 1 ಯೋಹಾ 2:28:
- Footnote ಫಿಲಿ. 4:1:
- Footnote 1 ಕೊರಿ 15:31; 2 ಥೆಸ. 1:4:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.