ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
1 ತಿಮೊ 1
ನಮ್ಮ ರಕ್ಷಕನಾದ ದೇವರ 1ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ 2ಅಪೊಸ್ತಲನಾದ ಪೌಲನು 3ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, 4ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.
ಸುಳ್ಳುಬೋಧನೆಯ ಬಗ್ಗೆ ಎಚ್ಚರಿಕೆ
ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, 5ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ, 6ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, 7ವಂಶಾವಳಿಗಳೂ 8ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ. 9ಶುದ್ಧಹೃದಯ, 10ಒಳ್ಳೆಯ ಮನಸ್ಸಾಕ್ಷಿ, 11ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ. ಕೆಲವರು ಈ ಗುರಿಯನ್ನು ಬಿಟ್ಟು 12ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, 13ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ. 14ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. ಧರ್ಮಶಾಸ್ತ್ರವು 15ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, 16ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ. ಈ ಬೋಧನೆಯು 17ಭಾಗ್ಯವಂತನಾದ 18ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. 19ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. 20
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, 21ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, 22ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ 23ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ 24ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; ಆದರೆ 25ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ 26ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು. 27ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು 28ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ 29ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. 30ಸರ್ವಯುಗಗಳ ಅರಸನೂ, 31ಅಮರನೂ, 32ಅದೃಶ್ಯನೂ ಆಗಿರುವ 33ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
ಮಗನಾದ ತಿಮೊಥೆಯನೇ, 34ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, 35ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ. 36ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ. 37ಹುಮೆನಾಯನೂ 38ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ 39ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
Source notes (39)
- Footnote ಕೊಲೊ 1:27
- Footnote 2 ಕೊರಿ 1:1
- Footnote ತೀತ 1:4
- Footnote 2 ತಿಮೊ 1:2; 2 ಯೊಹಾ 3; ಯೂದ 2
- Footnote 1 ತಿಮೊ 6:3 ಗಲಾ 1:6,7
- Footnote 1 ತಿಮೊ 4:7; 2 ತಿಮೊ 4:4; ತೀತ 1:14; 2 ಪೇತ್ರ 1:16
- Footnote ತೀತ 3:9
- Footnote 1 ತಿಮೊ. 6:4
- Footnote 2 ತಿಮೊ. 2:22
- Footnote 1 ಪೇತ್ರ. 3:16, 21
- Footnote 2 ತಿಮೊ 1:5
- Footnote ತೀತ 1:10
- Footnote 1 ತಿಮೊ 6:4; ಕೊಲೊ 2:18
- Footnote ರೋಮ 7:16
- Footnote ಗಲಾ 5:23
- Footnote 2 ತಿಮೊ 4:3; ತೀತ 1:9; 2:1; 1 ತಿಮೊ 6:3; 2 ತಿಮೊ 1:13; ತೀತ 1:13, 2:2
- Footnote 1 ತಿಮೊ 6:15
- Footnote 2 ಕೊರಿ 4:4
- Footnote ತೀತ 1:3,4; ಗಲಾ 2:7
- Footnote ಆ. ಕೃ 9:22; ಫಿಲಿ 4:13; 2 ತಿಮೊ 4:17
- Footnote ಆ. ಕೃ 8:3
- Footnote 2 ಕೊರಿ 3:6
- Footnote ಆ. ಕೃ. 3:17
- Footnote 1 ಕೊರಿ 7:25; 2 ಕೊರಿ 4:1
- Footnote ರೋಮ 5:20
- Footnote ಲೂಕ 7:47, 50; 1 ಥೆಸ. 1:3
- Footnote ಮತ್ತಾ 9:13; ಯೋಹಾ 3:17; ರೋಮ 4:25
- Footnote 1 ತಿಮೊ 3:1; 4:9; 2 ತಿಮೊ. 2:11; ತೀತ 3:8
- Footnote 1 ಕೊರಿ 15:9
- Footnote ಪ್ರಕ 15:3; 4:9,10
- Footnote 1 ತಿಮೊ 6:15,16; ರೋಮ 1:23
- Footnote ಯೋಹಾ 1:18; ಕೊಲೊ 1:15; ಇಬ್ರಿ 11:27; 1 ಯೋಹಾ 4:12
- Footnote ಯೂದ 25
- Footnote 1 ತಿಮೊ 4:14
- Footnote 1 ಕೊರಿ 9:7; 2 ಕೊರಿ 10:4; 2 ತಿಮೊ 2:3,4
- Footnote 1 ತಿಮೊ 3:9
- Footnote 2 ತಿಮೊ 2:7;
- Footnote 1 ತಿಮೊ 4:14
- Footnote ಕೊರಿ 5:5
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.