Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೊರಿ 13

ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. 1“ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ. ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ 2ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: 3ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ. ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ 4ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. 5ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; 6ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. 7ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, 8ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.

ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. 9ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ. ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. 10ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.

ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. 11ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ 12ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.

ಕಡೆ ಮಾತುಗಳು

ಕಡೆಯದಾಗಿ ಸಹೋದರರೇ, 13ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, 14ಏಕ ಮನಸ್ಸುಳ್ಳವರಾಗಿರಿ, 15ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, 16ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. 17ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 18ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. 19ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, 20ದೇವರ ಪ್ರೀತಿಯೂ, 21ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.

Source notes (21)
  1. Footnote ಧರ್ಮೋ 19:15; ಅರಣ್ಯ 35:30
  2. Footnote 2 ಕೊರಿ 13:10; 1 ಕೊರಿ 4:21
  3. Footnote 2 ಕೊರಿ 12:21
  4. Footnote 2 ಕೊರಿ 10:4
  5. Footnote ಫಿಲಿ. 2:7,8; 1 ಪೇತ್ರ 3:18
  6. Footnote ರೋಮಾ. 1:4; 6:4
  7. Footnote 2 ಕೊರಿ 12:10
  8. Footnote ರೋಮಾ. 6:8
  9. Footnote ರೋಮಾ. 8:10; ಗಲಾ. 4:19
  10. Footnote 1 ಕೊರಿ 4:10; 2 ಕೊರಿ 4:12; 12:5; 9:10
  11. Footnote 2 ಕೊರಿ 10:8
  12. Footnote 2 ಕೊರಿ 2:3
  13. Footnote ನಿಮಗೆ ಕ್ಷೇಮವಾಗಲಿ
  14. Footnote ರೋಮಾ. 12:16
  15. Footnote ಮಾರ್ಕ 9:50
  16. Footnote ರೋಮಾ. 15:33
  17. Footnote ರೋಮಾ. 16:16
  18. Footnote ಫಿಲಿ. 4:22
  19. Footnote ರೋಮಾ. 16:20; 1 ಕೊರಿ 16:23
  20. Footnote ಯೂದ. 21
  21. Footnote ಫಿಲಿ. 2:1

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.