Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೊರಿ 3

ಹೊಸ ಒಡಂಬಡಿಕೆಯ ಸೇವಕರು

1

ನಮ್ಮನ್ನು ನಾವೇ ಮತ್ತೆ ಹೊಗಳಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡೆದುಕೊಳ್ಳಬೇಕೋ? ಸ್ವತಃ 2“ನೀವೇ ನಮ್ಮ ಯೋಗ್ಯತಾ ಪತ್ರ” ಅದು ನಮ್ಮ ಹೃದಯಗಳಲ್ಲೇ ಬರೆದಿದೆ ಆ ಪತ್ರವನ್ನು ಎಲ್ಲರೂ ಬಲ್ಲರು. ಎಲ್ಲರೂ ಓದುತ್ತಾರೆ. ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. 3ಕಲ್ಲಿನ ಹಲಿಗೆಯ ಮೇಲಲ್ಲಾ, 4ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು. ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ. 5ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ 6ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು. ಆತನು 7ಹೊಸ ಒಡಂಬಡಿಕೆಗೆ 8ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ 9ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. 10ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ. 11ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ. ಹೀಗಿದ್ದ ಮೇಲೆ 12ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ? 13ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ? ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು. ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ? ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ. ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ. ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು 14ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ. ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ. 15ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು. ಆ ಕರ್ತನು ದೇವರಾತ್ಮನೇ. 16ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ. ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ 17ಕರ್ತನ ಪ್ರಭಾವವನ್ನು 18ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.

Source notes (18)
  1. Footnote 2 ಕೊರಿ 5:12, 10:12, 12:11
  2. Footnote 1 ಕೊರಿ 9:2
  3. Footnote ವಿಮೋ 24:12, ಧರ್ಮೋ 4:13
  4. Footnote ಜ್ಞಾ. 3:3, 7:, ಯೆಹೆ. 11:19, 36:26
  5. Footnote ಎಫೆ 2:8
  6. Footnote 1 ಕೊರಿ 5:10
  7. Footnote ಯೆರೆ 31:31, ಲೂಕ 22:30, 1 ಕೊರಿ 11:25
  8. Footnote ಎಫೆ 3:7, 2 ಕೊರಿ 4:1, 5:18
  9. Footnote ಆತ್ಮೀಕವಾದದ್ದು
  10. Footnote ಯೋಹಾ 6:63
  11. Footnote 2 ಕೊರಿ 3:9, ರೋಮಾ. 4:15
  12. Footnote ಆತ್ಮೀಕವಾದ
  13. Footnote 2 ಕೊರಿ 3:7, ಇಬ್ರಿ. 12:18-21
  14. Footnote ಅ. ಕೃ. 13:15, 21
  15. Footnote ರೋಮಾ. 11; 23
  16. Footnote ಯೆಶಾ 40:30-31
  17. Footnote 2 ಕೊರಿ 4:4-6, ಯೋಹಾ 17:24
  18. Footnote 1 ಕೊರಿ 13:12

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.