Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಹಾ 1

ಪೀಠಿಕೆ

1

ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ 2ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ; ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು 3ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, 4ಸತ್ಯವನ್ನು 5ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. 6ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.

ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ

ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು 7ಬಹಳ ಸಂತೋಷಪಟ್ಟೆನು. ಅಮ್ಮನವರೇ, 8ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು 9ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. 10ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, 11ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ. ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ 12ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ 13ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. 14ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, 15ಕಳೆದುಕೊಳ್ಳದೆ 16ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ17. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ 18ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಕೊನೆಯ ಮಾತುಗಳು

19

ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, 20ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. 21ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು. ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.

Source notes (21)
  1. Footnote 3 ಯೋಹಾ 1:
  2. Footnote ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ.
  3. Footnote 3 ಯೋಹಾ 1; 1 ಯೋಹಾ 3:18:
  4. Footnote ಯೋಹಾ 1:17; 14:6:
  5. Footnote ಯೋಹಾ 8:32; 1 ತಿಮೊ. 2:4:
  6. Footnote 1 ತಿಮೊ. 1:2; ಯೂದ 2:
  7. Footnote 3 ಯೋಹಾ 3,4:
  8. Footnote 1 ಯೋಹಾ 2:7:
  9. Footnote 1 ಯೋಹಾ 2:8; 3:11:
  10. Footnote 1 ಯೋಹಾ 5:3:
  11. Footnote 1 ಯೋಹಾ 2:24:
  12. Footnote ಮೂಲ: ಬರುವ. 1 ಯೋಹಾ 2:22; 4:2,3:
  13. Footnote 1 ಯೋಹಾ 2:18,26; 4:1:
  14. Footnote ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ.
  15. Footnote ಗಲಾ. 3:4; ಇಬ್ರಿ. 10:35:
  16. Footnote 1 ಕೊರಿ 3:8:
  17. Footnote 1 ಯೋಹಾ 2:23:
  18. Footnote ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10:
  19. Footnote 3 ಯೋಹಾ 13:
  20. Footnote 3 ಯೋಹಾ 14:
  21. Footnote ಯೋಹಾ 15:11; 17:13; 1 ಯೋಹಾ 1:4:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.