Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೇತ್ರ 2

ದುರ್ಮಾರ್ಗತನವನ್ನು ಬೋಧಿಸುವವರ ವಿಷಯದಲ್ಲಿ ಎಚ್ಚರಿಕೆ (ಯೂದ 1-19)

ಆದರೆ ಇಸ್ರಾಯೇಲ್ ಜನರೊಂದಿಗೆ 1ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ 2ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು 3ರಹಸ್ಯವಾಗಿ ಒಳಗೆತರುವವರೂ 4ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ 5ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. 6ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು 7ದ್ರವ್ಯಾಶೆಯುಳ್ಳವರಾಗಿ 8ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ 9ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ. ಹೇಗೆಂದರೆ 10ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ 11ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ 12ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ 13ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ 14ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. 15ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ 16ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ 17ಲೋಟನನ್ನು ಕಾಪಾಡಿದನು. ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ 18ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. ಕರ್ತನು 19ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. ಮುಖ್ಯವಾಗಿ 20ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು 21ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. 22ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. 23ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ. 24ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ 25ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. 26ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು 27ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು 28ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ. ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, 29ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, 30ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ. ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ 31ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು. ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. 32ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು. ಇವರು 33ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. 34ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ 35ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ 36ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು 37ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ 38ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.

ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ 39ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ 40ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. 41ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು. 42“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

Source notes (42)
  1. Footnote ಧರ್ಮೋ 13:1-3; ಯೆರೆ 14:14; 23:16; ಅ. ಕೃ. 13:6; 1 ಯೋಹಾ 4:1:
  2. Footnote ಅ. ಕೃ. 20:30; 2 ಕೊರಿ 11:13; 1 ತಿಮೊ. 4:1:
  3. Footnote ಯೂದ. 4; ಗಲಾ. 2:4:
  4. Footnote 1 ಕೊರಿ 6:20; 7:23; ಗಲಾ. 3:13; 4:5; ವಿಮೋ 15:16:
  5. Footnote ಮತ್ತಾ 10:33:
  6. Footnote ರೋಮಾ. 2:24:
  7. Footnote 1 ತಿಮೊ. 6:5; ತೀತ. 1:11:
  8. Footnote ರೋಮಾ. 16:18; ಕೊಲೊ 2:4:
  9. Footnote ಧರ್ಮೋ 32:35; ಫಿಲಿ. 3:19:
  10. Footnote ಯೂದ. 6:
  11. Footnote ಮತ್ತಾ 25:41:
  12. Footnote ಪ್ರಕ 20:2,3,10:
  13. Footnote 2 ಪೇತ್ರ. 3:6; 1 ಪೇತ್ರ. 3:20; ಆದಿ 7:10, 8:14:
  14. Footnote 1 ಪೇತ್ರ. 3:20:
  15. Footnote ಆದಿ 19:24:
  16. Footnote ಅರಣ್ಯ 26:10:
  17. Footnote ಆದಿ 19:16:
  18. Footnote ಕೀರ್ತ 119:136,158; ಯೆಹೆ. 9:4:
  19. Footnote 1 ಕೊರಿ 10:13; ಪ್ರಕ 3:10:
  20. Footnote ಯೂದ. 16,18.
  21. Footnote ಯೂದ. 8.
  22. Footnote ಯೂದ. 8. ಕೆಲವು ಪ್ರತಿಗಳಲ್ಲಿ ದೇವದೂತರು ಎಂದು ಬರೆದದೆ.
  23. Footnote ಯೂದ. 9:
  24. Footnote ಯೂದ. 10; ಯೆರೆ 12:3:
  25. Footnote ಫಿಲಿ. 3:19:
  26. Footnote ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ.
  27. Footnote 1 ಕೊರಿ 11:21:
  28. Footnote ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12:
  29. Footnote 1 ಪೇತ್ರ. 4:1:
  30. Footnote ಎಫೆ 2:3:
  31. Footnote ಅರಣ್ಯ 22:5,7; ಧರ್ಮೋ 23:4; ನೆಹೆ 13:2; ಯೂದ 11:
  32. Footnote ಅರಣ್ಯ 22:21,23,28:
  33. Footnote ಯೂದ 12:
  34. Footnote ಯೂದ 13:
  35. Footnote 2 ಪೇತ್ರ. 1:4; 2:20:
  36. Footnote ಯೂದ 16:
  37. Footnote ಗಲಾ. 5:13; ಯಾಕೋಬ. 1:25:
  38. Footnote ಯೋಹಾ 8:34; ರೋಮಾ. 6:16:
  39. Footnote ವ. 18:
  40. Footnote ಮತ್ತಾ 12:45:
  41. Footnote ಯೆಹೆ. 18:24; ಲೂಕ 12:47; ಯಾಕೋಬ. 4:17:
  42. Footnote ಜ್ಞಾ. 26:11:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.