ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
2 ಪೇತ್ರ 3
ದೇವರ ದಿನವು ತಡವಾದರೂ ಅದು ಬರುವುದು ನಿಶ್ಚಯ
ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. 1ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ 2ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ 3ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
ಕಡೆ ದಿನಗಳಲ್ಲಿ 4ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ, 5“ಆತನ ಪ್ರತ್ಯಕ್ಷತೆಯ ವಿಷಯವಾದ 6ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು 7ದೇವರ ವಾಕ್ಯದ ಮೂಲಕ 8ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. 9ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು 10ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ 11ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. 12ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. 13ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ 14ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ 15ದೀರ್ಘಶಾಂತಿಯುಳ್ಳವನಾಗಿದ್ದಾನೆ. ಆದರೂ 16ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. 17ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. 18ಮೂಲಧಾತುಗಳು ಉರಿದು ಲಯವಾಗಿ ಹೋಗುವವು. 19ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ
ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? 20ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ 21ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. ಆದರೂ ನಾವು ದೇವರ ವಾಗ್ದಾನದ ಪ್ರಕಾರ 22ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. 23ಅವುಗಳಲ್ಲಿ ನೀತಿಯು ವಾಸವಾಗಿರುವುದು. 24
ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು 25ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ. 26ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. 27ನಮ್ಮ ಪ್ರಿಯ ಸಹೋದರನಾದ ಪೌಲನು ಸಹ 28ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ 29ನಿಮಗೆ ಬರೆದಿದ್ದಾನೆ. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ 30ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು 31ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ. ಆದಕಾರಣ ಪ್ರಿಯರೇ, 32ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ 33ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ. ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ 34ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. 35ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
Source notes (35)
- Footnote ಲೂಕ 1:70; ಅ. ಕೃ. 3:21:
- Footnote ಯೂದ. 17:
- Footnote 2 ಪೇತ್ರ. 1:13:
- Footnote ಯೂದ. 18:
- Footnote 1 ಥೆಸ. 2:19:
- Footnote ಯೆಶಾ 5:19; ಯೆರೆ 17:15; ಯೆಹೆ. 11:3; 12:22, 27; ಮಲಾ. 2:17:
- Footnote ಆದಿ 1:6, 7, 9; ಕೀರ್ತ 33:6; ಇಬ್ರಿ. 11:3:
- Footnote ಕೀರ್ತ 24:2; 136:6:
- Footnote ಆದಿ 7:11, 21; 2 ಪೇತ್ರ. 2:5:
- Footnote 2 ಥೆಸ. 1:9:
- Footnote ಕೀರ್ತ 90. 4:
- Footnote ಹಬ 2:3; ಇಬ್ರಿ. 10:37; ಪ್ರಸಂಗಿ. 8:11:
- Footnote ಯೆಹೆ. 18:23, 32; 33:11:
- Footnote 1 ತಿಮೊ. 2:4:
- Footnote ಯೆಶಾ 30. 18; ಲೂಕ 18:7; 1 ಪೇತ್ರ. 3:20:
- Footnote ಮತ್ತಾ 24:42-51; ಲೂಕ 12:39-46; 1 ಥೆಸ. 5:2; ಪ್ರಕ 3:3:
- Footnote ಮತ್ತಾ 24:35; ಇಬ್ರಿ. 12:26, 27; ಪ್ರಕ 6:14; 20:11; 21:1:
- Footnote ಯೆಶಾ 34:4:
- Footnote ಕೆಲವು ಪ್ರತಿಗಳಲ್ಲಿ ಭೂಮಿಯೂ ಅದರಲ್ಲಿರುವ ಕೆಲಸಗಳೂ ಕಾಣುವವೇ? ಎಂದು ಬರೆದದೆ.
- Footnote 1 ಪೇತ್ರ. 1:15:
- Footnote ಅಥವಾ, ಬೇಗ ಬರುವಂತೆ ಪ್ರಯತ್ನಿಸುತ್ತಾ.
- Footnote ಯೆಶಾ 65:17; 66:22; ಪ್ರಕ 21:1:
- Footnote ಯೆಶಾ 60. 21; ಪ್ರಕ 21:27:
- Footnote 1 ಕೊರಿ 15:58; 1 ಥೆಸ. 3:13; 5:23:
- Footnote ಯಾಕೋಬ 1:27; ಫಿಲಿ. 2:15:
- Footnote ವ. 9:
- Footnote ಅ. ಕೃ. 15:25:
- Footnote 1 ಕೊರಿ 3:10:
- Footnote ರೋಮಾ. 2:4:
- Footnote ರೋಮಾ. 8:19; 1 ಕೊರಿ 15:24; 1 ಥೆಸ. 4:15:
- Footnote ಯೆಶಾ 28:13:
- Footnote 2 ಪೇತ್ರ. 1:12:
- Footnote 2 ಪೇತ್ರ. 1:10; 1:1 ಕೊರಿ 10:12:
- Footnote 2 ಪೇತ್ರ. 1:5; ಎಫೆ 4:15; ಕೊಲೊ 1:10; 2:19; 1 ಪೇತ್ರ. 2:2:
- Footnote ರೋಮಾ. 11:36:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.