Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಥೆಸ 1

ಪೀಠಿಕೆ

1

ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.

ದೇವರಿಗೆ ಕೃತಜ್ಞತಾಸ್ತುತಿ

2

ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ. ಹೀಗಿರುವುದರಿಂದ 3ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ 4ನಿಮಿತ್ತ 5ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. 6

ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ 7ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ 8ನಮ್ಮೊಡನೆ ಉಪಶಮನವನ್ನೂ ಕೊಡುವುದು 9ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. ಯೇಸು ಕರ್ತನು 10ತನ್ನ ಶಕ್ತಿಯುತ ದೇವದೂತರೊಂದಿಗೆ 11ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ 12ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ 13ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. ಆ ದಿನದಲ್ಲಿ ಆತನು ಬರುವಾಗ ತನ್ನ 14ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು. 15ಆದುದರಿಂದ 16ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ 17ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, 18ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ. ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.

Source notes (18)
  1. Footnote ವ. 1, 2; 1 ಥೆಸ. 1:1:
  2. Footnote 2 ಥೆಸ. 2:13; 1 ಥೆಸ. 1:2, 3; ಎಫೆ 5:20:
  3. Footnote 1 ಥೆಸ. 2:14:
  4. Footnote 1 ಥೆಸ. 2:19; 2 ಕೊರಿ 7:14:
  5. Footnote 1 ಥೆಸ. 1:8:
  6. Footnote ಫಿಲಿ. 1:28:
  7. Footnote ಅ. ಕೃ. 14:22:
  8. Footnote ಪ್ರಕ 6:11; 11:18; 14:13:
  9. Footnote ಪ್ರಕ 6:10:
  10. Footnote ಯೂದ 14:
  11. Footnote ಯೆಶಾ 66:15, 16; ಮಲಾ. 4:1; ಮತ್ತಾ 25:41; 1 ಕೊರಿ 3:13; ಇಬ್ರಿ. 10:27; 12:29; ಪ್ರಕ 21:8:
  12. Footnote ಲೂಕ 17:30; 1 ಕೊರಿ 1:7; 1 ಪೇತ್ರ. 1:7, 13; 4:13; ಮತ್ತಾ 16:27; 24:44:
  13. Footnote ರೋಮಾ. 2:8:
  14. Footnote ಯೆಶಾ 49:3; ಯೋಹಾ 17:10:
  15. Footnote 1 ಕೊರಿ 3:13:
  16. Footnote ಕೊಲೊ 1:9:
  17. Footnote ವ. 5:
  18. Footnote 1 ಥೆಸ. 1:3:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.