ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
2 ಥೆಸ 2
ಅಧರ್ಮ ಪುರುಷನು
ಸಹೋದರರೇ, ನಮ್ಮ ಕರ್ತನಾದ 1ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು 2ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ 3ಆತ್ಮದಿಂದಾಗಲಿ 4ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ 5ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ 6ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ 7ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು 8ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ. 9ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು. ಆಗ 10ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು 11ತನ್ನ ಬಾಯಿಯ ಉಸಿರಿನಿಂದ 12ಕೊಲ್ಲುವನು, 13ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು. ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ 14ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ, ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ 15ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. ಇದೇ ಕಾರಣದಿಂದ 16ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು 17ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ. 18ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ 19ಗುರಿಯಾಗುವರು.
ದೃಢವಾಗಿ ನಿಲ್ಲಿರಿ
ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, 21ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, 22ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು 23ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು 24ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ. ನೀವು ಹೀಗೆ 25ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು. ಹೀಗಿರುವುದರಿಂದ ಸಹೋದರರೇ, 26ದೃಢವಾಗಿ ನಿಲ್ಲಿರಿ. 27ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ. ಮತ್ತು 28ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ 29ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ 30ದೃಢಪಡಿಸಲಿ.
Source notes (30)
- Footnote 1 ಥೆಸ. 2:19:
- Footnote ಮತ್ತಾ 24:31; 1 ಥೆಸ. 4:15-17:
- Footnote 1 ಯೋಹಾ 4:1:
- Footnote ವ. 15:
- Footnote 1 ತಿಮೊ. 4:1:
- Footnote ವ. 8; ದಾನಿ. 7:25; 8:25; 11:36; ಪ್ರಕ 13:5, 6. ವಿಧ್ವಂಸಕನು
- Footnote ಯೋಹಾ 17:12:
- Footnote ಯೆಶಾ 14:14; ಯೆಜೆ. 28:2:
- Footnote 1 ಯೋಹಾ 2:18; 4:3:
- Footnote ವ. 3:
- Footnote ಯೆಶಾ 11:4:
- Footnote ದಾನಿ. 7:10, 11:
- Footnote 1 ತಿಮೊ. 6:14; 2 ತಿಮೊ. 1:10; 4:1, 8; ತೀತ. 2:13:
- Footnote ಮತ್ತಾ 24:24; ಪ್ರಕ 13:14:
- Footnote 1 ಕೊರಿ 1:18:
- Footnote 1 ಅರಸು 22:22; ಯೆಹೆ. 14:9:
- Footnote ರೋಮಾ. 1:25:
- Footnote ರೋಮಾ. 1:32; 2:8:
- Footnote ಅಥವಾ, ಒಳಗಾಗಬೇಕೆಂಬುದೇ ದೇವರ ಉದ್ದೇಶ.
- Footnote 1 ಥೆಸ. 1:4:
- Footnote 1 ಥೆಸ. 4:3:
- Footnote 1 ಥೆಸ. 5:9; 2 ತಿಮೊ. 1:9:
- Footnote ಕೆಲವು ಪ್ರತಿಗಳಲ್ಲಿ, ಪ್ರಥಮಫಲವಾಗಿ ಎಂದು ಬರೆದದೆ.
- Footnote 1 ಥೆಸ. 1:3:
- Footnote 1 ಥೆಸ. 5:9; 2 ತಿಮೊ. 1:9:
- Footnote 1 ಕೊರಿ 16:13:
- Footnote ವ. 2:
- Footnote ಯೋಹಾ 3:16; 1 ಯೋಹಾ 4:10; ಪ್ರಕ 1:5
- Footnote 1 ಪೇತ್ರ. 1:3:
- Footnote 1 ಥೆಸ. 3:13; 2 ಥೆಸ. 3:3:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.