ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
2 ಥೆಸ 3
ಪ್ರಾರ್ಥನೆಗಾಗಿ ವಿನಂತಿ
ಕಡೆಯದಾಗಿ, 1ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ 2ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ, 3ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ. ಆದರೆ 4ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು 5ಕೆಡುಕನ ಕೈಗೆ 6ಸಿಕ್ಕದಂತೆ ಕಾಪಾಡುವನು. ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು. ನೀವು ದೇವರ ಪ್ರೀತಿಯಲ್ಲಿಯೂ 7ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
ಮೈಗಳ್ಳರಿಗೆ ಎಚ್ಚರಿಕೆ
ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ 8ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ 9ಸಹೋದರನಿಂದ ನೀವು 10ದೂರವಾಗಿರಬೇಕೆಂದು 11ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ. 12ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, 13ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ. ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, 14ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು. 15ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, 16ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು. ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, 17“ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, 18ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ. ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ. ಸಹೋದರರೇ, 19ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ 20ಅವನ ಸಹವಾಸದಲ್ಲಿ ಸೇರಬೇಡಿರಿ. ಆದರೂ 21ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
ಸಮಾಪ್ತಿ ವಾಕ್ಯಗಳು
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ 23ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ. 24
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ. 25
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.
Source notes (25)
- Footnote 1 ಥೆಸ. 5:25:
- Footnote ಕೀರ್ತ 147:15; 1 ಥೆಸ. 1:8:
- Footnote ರೋಮಾ. 15:31:
- Footnote 1 ಕೊರಿ 1:9:
- Footnote 1 ಯೋಹಾ 2:14:
- Footnote ಮತ್ತಾ 6:13; ಯೋಹಾ 17:15:
- Footnote ಅಥವಾ, ಕ್ರಿಸ್ತನನ್ನು ಎದುರುನೋಡುವ.
- Footnote ವ. 11; 1 ಥೆಸ. 5:14:
- Footnote 1 ಕೊರಿ 5:11:
- Footnote ವ. 14; ಮತ್ತಾ 18:17; 2 ತಿಮೊ. 3:5; 1 ಕೊರಿ 5:9; 2 ಯೋಹಾ 10:
- Footnote 1 ಕೊರಿ 5:4:
- Footnote ಅ. ಕೃ. 20:35; 1 ಥೆಸ. 1:6:
- Footnote 1 ಥೆಸ. 1:5
- Footnote 1 ಥೆಸ. 2:9:
- Footnote 1 ಕೊರಿ 9:4; 1 ಥೆಸ. 2:6:
- Footnote ವ. 7; 1 ಪೇತ್ರ. 5:3:
- Footnote ಆದಿ 3:19; 1 ಥೆಸ. 4:11:
- Footnote 1 ತಿಮೊ. 5:13; 1 ಪೇತ್ರ. 4:15:
- Footnote ಗಲಾ. 6:9; 1 ಕೊರಿ 15:58:
- Footnote ವ. 6:
- Footnote ಯಾಜಕ. 19:17; ಮತ್ತಾ 18:15:
- Footnote ರೋಮಾ. 15:33:
- Footnote ಅರಣ್ಯ 6:26:
- Footnote 1 ಕೊರಿ 16:21:
- Footnote ರೋಮಾ. 16:20:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.