ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
2 ತಿಮೊ 1
ಪೀಠಿಕೆ
ಕ್ರಿಸ್ತಯೇಸುವಿನಲ್ಲಿರುವ 1ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ 2ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ 3ಅಪೊಸ್ತಲನಾದ ಪೌಲನು, 4ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, 5ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.
ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ 7ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. 8ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ 9ಸ್ತೋತ್ರಸಲ್ಲಿಸುತ್ತೇನೆ. ನಾನು 10ನಿನ್ನ ಕಣ್ಣೀರನ್ನು ನೆನಪಿಗೆ ತಂದು 11ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ. ನಿನ್ನಲ್ಲಿರುವ 12ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ 13ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.
ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ 14ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ. ದೇವರು ನಮಗೆ ಕೊಟ್ಟಿರುವ ಆತ್ಮವು 15ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು 16ಹೇಡಿತನದ ಆತ್ಮವಲ್ಲ.
ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ 17ಸಾಕ್ಷಿಯ ವಿಷಯದಲ್ಲಾಗಲಿ ಆತನ 18ಸೆರೆಯವನಾದ ನನ್ನ ವಿಷಯದಲ್ಲಾಗಲಿ 19ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ 20ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. 21ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, 22ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ 23ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು 24ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ 25ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. 26ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. 27
ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. 28ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. 29ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು 30ಆತನು 31ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ. ನೀನು 32ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ 33ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. 34ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು 35ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ. 36
ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ. 37ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. 38ನನ್ನ ಬೇಡಿಗಳಿಗೆ ನಾಚಿಕೆಪಡದೆ, ರೋಮಾಪುರಕ್ಕೆ ಬಂದಕೂಡಲೆ 39ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು. ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Source notes (39)
- Footnote ತೀತ. 1:2; ಇಬ್ರಿ. 9:15
- Footnote 1 ಕೊರಿ 1:1
- Footnote 2 ಕೊರಿ 1:1
- Footnote 1 ಕೊರಿ 4:17, 2 ತಿಮೊ. 2:1; ಅ. ಕೃ. 16:1
- Footnote 1 ತಿಮೊ. 1:2
- Footnote ರೋಮಾ. 1:9
- Footnote ಅ. ಕೃ. 22:3; 24:14
- Footnote 1 ತಿಮೊ. 3:9; ಅ. ಕೃ. 23:1
- Footnote ರೋಮಾ. 1:8
- Footnote ಅ. ಕೃ. 20:37
- Footnote ಫಿಲಿ. 1:8
- Footnote 1 ತಿಮೊ. 1:5
- Footnote ಅ. ಕೃ. 16:1; 1 ತಿಮೊ. 3:15
- Footnote 1 ತಿಮೊ. 4:14, 1 ಥೆಸ. 5:19
- Footnote ಲೂಕ 24:49; ಅ. ಕೃ. 1:8
- Footnote ರೋಮಾ. 8:15; ಯೋಹಾ 14:27; ಪ್ರಕ 21:8
- Footnote 1 ಕೊರಿ 1:6
- Footnote 2 ತಿಮೊ. 1:16; ಎಫೆ 3:1
- Footnote ರೋಮಾ. 1:16; ಇಬ್ರಿ. 11:16; 1 ಯೋಹಾ 2:28
- Footnote 2 ತಿಮೊ. 2:3,9; 4:5
- Footnote ತೀತ. 3:5, ರೋಮಾ. 3:27
- Footnote ಇಬ್ರಿ. 3:11; ರೋಮಾ. 8:28
- Footnote 1 ತಿಮೊ. 1:1; ತೀತ. 3:4
- Footnote ತೀತ. 1:2, ರೋಮಾ. 16:25; ಎಫೆ 1:4
- Footnote 2 ಥೆಸ. 2:8
- Footnote 1 ಕೊರಿ 15:26, 54, 55; ಇಬ್ರಿ. 2:14,15
- Footnote 1 ತಿಮೊ. 2:7
- Footnote 2 ತಿಮೊ. 2:9
- Footnote 1 ಪೇತ್ರ 4:19
- Footnote ನಾನು ಆತನ
- Footnote 2 ತಿಮೊ. 1:18; 4:8; 1 ಕೊರಿ 3:13
- Footnote 1 ತಿಮೊ. 1:14
- Footnote 1 ತಿಮೊ. 1:10
- Footnote 1 ತಿಮೊ. 6:20
- Footnote ರೋಮ. 8:9
- Footnote ಅ. ಕೃ. 19:10
- Footnote 2 ತಿಮೊ. 4:19
- Footnote ವ. 8; ಅ. ಕೃ. 28:20
- Footnote ಮತ್ತಾ 25:36-40
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.