Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಿಮೊ 2

1

ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ 2ಬಲಹೊಂದಿದವನಾಗು. ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು 3ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. 4ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು. ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ. ಇದಲ್ಲದೆ 5ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ 6ಜಯಮಾಲೆಯು ದೊರಕುವುದಿಲ್ಲ. 7ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ. ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. 8ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ 9ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, 10ಇದೇ ನಾನು ಸಾರುವ ಸುವಾರ್ತೆ. ಇದರಲ್ಲಿ 11ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ 12ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. 13ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು 14ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು 15ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. 16ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ

“17ನಾವು ಆತನೊಡನೆ ಸತ್ತಿದ್ದರೆ 18

ಆತನೊಡನೆ ಜೀವಿಸುವೆವು, 19

ಸಹಿಸಿಕೊಳ್ಳುವವರಾಗಿದ್ದರೆ

ಆತನೊಡನೆ ಆಳುವೆವು. 20

ನಾವು ಯೇಸುವಿನವರಲ್ಲವೆಂದು ಹೇಳಿದರೆ 21

ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

ನಾವು ಅಪನಂಬಿಗಸ್ತರಾಗಿದ್ದರೂ 22

ಆತನು ನಂಬಿಗಸ್ತನಾಗಿಯೇ ಇರುವನು.

ಆತನು 23ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”

ಅನುಮೋದಿತನಾದ ಸೇವಕನು

ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ 24ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು. ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು. 25ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ 26ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ 27ಹುಮೆನಾಯನೂ ಪಿಲೇತನೂ ಇದ್ದಾರೆ. ಅವರು ಸತ್ಯಭ್ರಷ್ಟರಾಗಿ 28ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ. ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ 29“ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ. 30

ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ 31ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ. 32ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, 33ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.

ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. 34ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. 35ಕರ್ತನ ಸೇವಕನು ಜಗಳವಾಡದೆ, 36ಎಲ್ಲರ ವಿಷಯದಲ್ಲಿ ಸಾಧುವೂ, 37ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ ಎದುರಿಸುವವರನ್ನು 38ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. 39ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ 40ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು. 41ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

Source notes (41)
  1. Footnote 2 ತಿಮೊ. 1:2
  2. Footnote ಎಫೆ 6:10
  3. Footnote ತೀತ 1:5
  4. Footnote 1 ತಿಮೊ 1:18; 2 ತಿಮೊ. 1:; 4:5
  5. Footnote 1 ಕೊರಿ 9:25
  6. Footnote 2 ತಿಮೊ. 4:8
  7. Footnote 1 ಕೊರಿ 9:10; ಇಬ್ರಿ. 6:7; ಯಾಕೋಬ 5:7
  8. Footnote ದಾವೀದನ ವಂಶದವನಾದ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂಬುದನ್ನು ಜ್ಞಾಪಕಮಾಡಿಕೋ; 1 ಕೊರಿ 15:20
  9. Footnote ಮತ್ತಾ 1:1
  10. Footnote ರೋಮಾ. 2:16
  11. Footnote 2 ತಿಮೊ. 1:8, 12
  12. Footnote ಫಿಲಿ. 1:7
  13. Footnote 2 ತಿಮೊ. 4:17; ಫಿಲಿ 1:13
  14. Footnote 1 ಪೇತ್ರ 5:10
  15. Footnote ಎಫೆ 3:13; ಕೊಲೊ 1:24; 1 ಕೊರಿ 3:7
  16. Footnote 1 ತಿಮೊ. 1:15
  17. Footnote 1 ಥೆಸ. 5:10; ರೋಮಾ. 6:8
  18. Footnote ಪ್ರಕ 20:4
  19. Footnote 2 ಥೆಸ. 1:4,5; ರೋಮಾ. 8:17; ಇಬ್ರಿ. 10:36; ಪ್ರಕ 20:4
  20. Footnote ಮತ್ತಾ 10:33; ಮಾರ್ಕ 8:38; 2 ಪೇತ್ರ 2:1; 1 ಯೋಹಾ 2:23
  21. Footnote ಮತ್ತಾ 7:23; 10:33; 25:12; ಲೂಕ 13:25
  22. Footnote 1 ಕೊರಿ 1:9
  23. Footnote ಅರಣ್ಯ 23:19; ತೀತ 3:9
  24. Footnote 1 ತಿಮೊ. 6:4; ವ. 23
  25. Footnote 1 ತಿಮೊ. 6:20
  26. Footnote ತೀತ 3:9
  27. Footnote 1 ತಿಮೊ. 1:20
  28. Footnote 1 ಕೊರಿ 15:12
  29. Footnote ಅರಣ್ಯ 16:5; ನಹೂ. 1:7; ಯೋಹಾ 10:14, 27; 1 ಕೊರಿ 8:3
  30. Footnote 1 ತಿಮೊ. 3:15
  31. Footnote ರೋಮಾ. 9:21
  32. Footnote ಜ್ಞಾ. 25:4; ಯೆಶಾ 52:11
  33. Footnote 2 ತಿಮೊ. 3:17; ತೀತ 3:1
  34. Footnote 1 ತಿಮೊ. 6:4
  35. Footnote ಮತ್ತಾ 12:18
  36. Footnote 1 ಥೆಸ. 2:7
  37. Footnote 1 ತಿಮೊ. 3:2
  38. Footnote ಗಲಾತ್ಯ. 6:1; ತೀತ 3:2
  39. Footnote ಅ. ಕೃ. 8:22
  40. Footnote 1 ತಿಮೊ. 2:4
  41. Footnote 1 ತಿಮೊ. 3:7

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.