ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
2 ತಿಮೊ 3
ಅಂತ್ಯ ದಿನಗಳು
ಆದರೆ 1ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ. ಮನುಷ್ಯರು 2ಸ್ವಾರ್ಥಚಿಂತಕರೂ, 3ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, 4ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, 5ಒಳ್ಳೆಯದನ್ನು ದ್ವೇಷಿಸುವವರೂ, ದ್ರೋಹಿಗಳೂ, ದುಡುಕುವವರೂ, 6ದುರಹಂಕಾರವುಳ್ಳವರೂ, 7ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು. ಅವರಲ್ಲಿ ಕೆಲವರು 8ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ. ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ 9ಸತ್ಯದ ಪರಿಜ್ಞಾನವನ್ನು ಹೊಂದಲಾರದವರು. 10ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ. ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. 11ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು. 12
ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ, 13ಅಂತಿಯೋಕ್ಯ, 14ಇಕೋನ್ಯ, 15ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, 16ಅವೆಲ್ಲವುಗಳೊಳಗಿನಿಂದ 17ಕರ್ತನು ನನ್ನನ್ನು ಬಿಡಿಸಿದನು. 18ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ 19ಹೆಚ್ಚಾದ ಕೆಟ್ಟತನಕ್ಕೆ ಹೋಗುವರು. 20ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು. 21ಚಿಕ್ಕಂದಿನಿಂದಲೂ ನಿನಗೆ 22ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ 23ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ. ದೈವ ಪ್ರೇರಿತವಾದ 24ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದ್ದರಿಂದ 25ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
Source notes (25)
- Footnote 1 ತಿಮೊ 4:1
- Footnote ಫಿಲಿ 2:21
- Footnote ಲೂಕ 16:14; 1 ತಿಮೊ 6:10
- Footnote ರೋಮಾ. 1:31
- Footnote ತೀತ 1:8
- Footnote 1 ತಿಮೊ 3:6; 6:4
- Footnote ಫಿಲಿ 3:19
- Footnote ತೀತ 1:11
- Footnote 1 ತಿಮೊ 2:4
- Footnote ವಿಮೋ 7:11
- Footnote ವಿಮೋ 7:12; 8:18; 9:11
- Footnote ಫಿಲಿ 2:22
- Footnote ಅ. ಕೃ 13:14; 45, 50
- Footnote ಅ. ಕೃ 14:1,2,5
- Footnote ಅ. ಕೃ 14:6,19
- Footnote ಕೀರ್ತ 34:19
- Footnote 2 ತಿಮೊ 4:17
- Footnote ಅ. ಕೃ 14:22
- Footnote ಪ್ರಕ 22:11
- Footnote 2 ತಿಮೊ 1:13
- Footnote 2 ತಿಮೊ 1:5
- Footnote ಯೋಹಾ 5:39
- Footnote ಕೀರ್ತ 119:99
- Footnote ರೋಮ 15:4; 2 ಪೇತ್ರ 1:20,21
- Footnote 1 ತಿಮೊ 6:11
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.