Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಿಮೊ 4

ನಾನು ದೇವರ ಸಮಕ್ಷಮದಲ್ಲಿ ಮತ್ತು 1ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, 2ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ 3ಖಂಡಿಸು, ಗದರಿಸು, ಎಚ್ಚರಿಸು. ಯಾಕೆಂದರೆ ಜನರು 4ಸ್ವಸ್ಥಬೋಧನೆಯನ್ನು ಒಪ್ಪಲಾರದ 5ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯ ಬೋಧನೆಗೆ ಕಿವಿಗೊಡದೆ 6ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು. ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ 7ಸ್ವಸ್ಥಚಿತ್ತನಾಗಿರು, 8ಹಿಂಸೆಯನ್ನು ತಾಳಿಕೋ, 9ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು. ಯಾಕೆಂದರೆ ನಾನಂತೂ 10ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. 11ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ. 12ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, 13ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. 14ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು 15ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು 16ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಪೌಲನ ವೈಯುಕ್ತಿಕ ಆದೇಶಗಳು

ನೀನು 17ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು, ಯಾಕೆಂದರೆ 18ದೇಮನು ಇಹಲೋಕವನ್ನು 19ಪ್ರೀತಿಸಿ, 20ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ 21ತೀತನು ದಲ್ಮಾತ್ಯಕ್ಕೂ ಹೋದರು. 22ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. 23ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ. 24ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. 25

ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. 26ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು. ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು. ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. 27ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ. 28ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, 29ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು 30ಸಿಂಹದ ಬಾಯೊಳಗಿಂದ ತಪ್ಪಿಸಿದನು. 31ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. 32ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಂತಿಮ ವಂದನೆಗಳು

33

ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, 34ಒನೇಸಿಪೊರನ ಮನೆಯವರಿಗೂ ವಂದನೆಹೇಳು. 35ಎರಸ್ತನು ಕೊರಿಂಥದಲ್ಲಿ ನಿಂತನು. 36ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು. 37ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.

ಕರ್ತನು 38ನಿನ್ನ ಆತ್ಮದೊಂದಿಗೆ ಇರಲಿ. ಆತನ 39ಕೃಪೆಯು ನಿಮ್ಮೊಂದಿಗಿರಲಿ.

Source notes (39)
  1. Footnote ಅ. ಕೃ 10:42; 17:31; 24:25; ಯೋಹಾ 5:22, 27; 2 ಕೊರಿ 5:10; 1 ಪೇತ್ರ 4:5
  2. Footnote ವ. 8; 2 ಥೆಸ. 2:8
  3. Footnote 1 ತಿಮೊ 5:20; ತೀತ 1:13; 2:15
  4. Footnote 1 ತಿಮೊ 1:10
  5. Footnote 2 ತಿಮೊ 3:1
  6. Footnote 1 ತಿಮೊ 1:4,6
  7. Footnote 1 ಪೇತ್ರ 1:13
  8. Footnote 2 ತಿಮೊ 1:8; 2:3; 9
  9. Footnote ಅ. ಕೃ 21:8; ಎಫೆ 4:11
  10. Footnote ಫಿಲಿ 2:17
  11. Footnote ಫಿಲಿ 1:23
  12. Footnote 1 ತಿಮೊ 6:12
  13. Footnote ಅ ಕೃ 20:24
  14. Footnote ಮೂಲ: ನೀತಿಯೆಂಬ
  15. Footnote ಕೀರ್ತ 7:11
  16. Footnote 2 ತಿಮೊ 1:12
  17. Footnote 2 ತಿಮೊ. 1:4
  18. Footnote ಕೊಲೊ 4:14; ಫಿಲಿ 24
  19. Footnote 1 ಯೋಹಾ 2:15
  20. Footnote 2 ತಿಮೊ 1:15
  21. Footnote ತೀತ 3:12
  22. Footnote 1 ತಿಮೊ 1:15
  23. Footnote ಅ. ಕೃ 12:12
  24. Footnote ಅ. ಕೃ 20:4; ಎಫೆ 6:21; ಕೊಲೊ 4:7; ತೀತ 3:12
  25. Footnote 1 ತಿಮೊ 1:20
  26. Footnote ಕೀರ್ತ 62:12; ಜ್ಞಾ 24:12
  27. Footnote ಅ. ಕೃ 7:60
  28. Footnote ಅ. ಕೃ 23:11; 27:23; ಮತ್ತಾ 10:19
  29. Footnote ಅ. ಕೃ 9:15
  30. Footnote 1 ಪೇತ್ರ 5:8; ಕೀರ್ತ 22:21
  31. Footnote ಮತ್ತಾ 6:13
  32. Footnote ರೋಮಾ 11:36
  33. Footnote ಅ. ಕೃ. 18:2
  34. Footnote 2 ತಿಮೊ 1:16
  35. Footnote ಅ. ಕೃ. 19:22; ರೋಮಾ 16:23
  36. Footnote ಅ. ಕೃ 20:4; 21:29
  37. Footnote ವ. 9
  38. Footnote ಗಲಾ 6:18; ಫಿಲಿ 25
  39. Footnote ಕೊಲೊ 4:18

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.