Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೊಲೊ 1

ಪೀಠಿಕೆ

1

ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ 2ಅಪೊಸ್ತಲನಾಗಿರುವ ಪೌಲನೂ ಮತ್ತು 3ಸಹೋದರನಾದ ತಿಮೊಥೆಯನು, ಕೊಲೊಸ್ಸೆಯಲ್ಲಿರುವ 4ದೇವಜನರಿಗೆ ಹಾಗು ಕ್ರಿಸ್ತನಲ್ಲಿ 5ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, 6ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.

ಕೃತಜ್ಞತಾಸ್ತುತಿ ಮತ್ತು ಪ್ರಾರ್ಥನೆ

ನಿಮಗೋಸ್ಕರ 7ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ. 8ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ 9ಫಲಕೊಟ್ಟಂತೆ 10ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ. ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ 11ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ. 12ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.

ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ 13ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ 14ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ, 15ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, 16ಸಕಲ ಸತ್ಕಾರ್ಯಗಳಲ್ಲಿ 17ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ, 18ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ 19ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ, ದೇವಭಕ್ತರಿಗಾಗಿ 20ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ. ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ 21ಪ್ರಿಯ ಕುಮಾರನ 22ಸಾಮ್ರಾಜ್ಯಕ್ಕೆ ಸೇರಿಸಿದನು. 23ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.

ಕ್ರಿಸ್ತನ ಉತ್ಕೃಷ್ಟತೆ

ಕ್ರಿಸ್ತನು 24ಅದೃಶ್ಯನಾದ ದೇವರ 25ಪ್ರತಿರೂಪನೂ, ಸೃಷ್ಟಿಗೆಲ್ಲಾ 26ಜೇಷ್ಠಪುತ್ರನೂ ಆಗಿದ್ದಾನೆ. ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, 27ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. 28ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. 29ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. 30ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, 31ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ 32ಮೊದಲು ಎದ್ದು ಬಂದವನು ಆತನೇ. ಏಕೆಂದರೆ 33ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ 34ತಾನು ಸಮಾಧಾನವನ್ನುಂಟುಮಾಡಿ, 35ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಇದಲ್ಲದೆ 36ನೀವು ಪೂರ್ವದಲ್ಲಿ ಅನ್ಯರು ನಿಮ್ಮ 37ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. ಈಗಲಾದರೋ ದೇವರು ನಿಮ್ಮನ್ನು 38ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, 39ನಿರಪರಾಧಿಗಳನ್ನಾಗಿಯೂ 40ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. 41ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ 42ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.

ಸಭೆಗಾಗಿ ಪೌಲನ ಸೇವೆ

ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. 43ಕ್ರಿಸ್ತನ 44ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ 45ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ. ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ 46ನಾನು ಸಭೆಗೆ ಸೇವಕನಾದೆನು. 47ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು. 48ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. 49ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು 50ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ 51ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ. ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ 52ಪ್ರವೀಣರನ್ನಾಗಿ 53ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ. 54ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ 55ಹೋರಾಡುತ್ತೇನೆ.

Source notes (55)
  1. Footnote 1 ಕೊರಿ 1:1
  2. Footnote 2 ಕೊರಿ 1:1
  3. Footnote 2 ಕೊರಿ 1:1; ಕೊಲೊ 1:1; ಫಿಲೆ. 1; ಇಬ್ರಿ. 13:23
  4. Footnote ಎಫೆ 1:1; ಫಿಲಿ. 1:1
  5. Footnote ನಂಬುವವರಾದ
  6. Footnote ರೋಮಾ. 1:7; ಎಫೆ 1:2
  7. Footnote ಎಫೆ 1:15, 16; ಫಿಲಿ. 4:5
  8. Footnote 2 ತಿಮೊ. 4:8; 1 ಪೇತ್ರ. 1:4; ಕೊಲೊ 1:23; ಅ. ಕೃ. 23:6
  9. Footnote ಯೋಹಾ 15:5-16; ಫಿಲಿ. 1:11
  10. Footnote ಕೊಲೊ 1:23; ಕೀರ್ತ 98:3; ಮತ್ತಾ 24:14
  11. Footnote ಕೊಲೊ 4:12; ಫಿಲೆ. 23
  12. Footnote ರೋಮಾ. 15:30
  13. Footnote 2 ಥೆಸ. 1:11
  14. Footnote ಕೊಲೊ 4:5; ಎಫೆ 1:8
  15. Footnote ಎಫೆ 1:17
  16. Footnote 2 ಕೊರಿ 5:9; ಎಫೆ 5:10
  17. Footnote ಎಫೆ 4:1
  18. Footnote ಎಫೆ 3:6,17
  19. Footnote ಎಫೆ 4:2
  20. Footnote ಅ. ಕೃ. 26:18
  21. Footnote ಎಫೆ 1:6
  22. Footnote 2 ಪೇತ್ರ. 1:11
  23. Footnote ಎಫೆ 1:7
  24. Footnote 1 ತಿಮೊ 1:17
  25. Footnote 2 ಕೊರಿ 4:4
  26. Footnote ಕೀರ್ತ 89:27; ಜ್ಞಾ. 8:24-31; ರೋಮಾ. 8:29 ಸೃಷ್ಟಿಗೆಲ್ಲಾ ಶ್ರೇಷ್ಠನೂ ಆಗಿದ್ದಾನೆ.
  27. Footnote ಎಫೆ 1:21
  28. Footnote ಯೋಹಾ 1:3; ರೋಮಾ. 11:36; 1 ಕೊರಿ 8:6
  29. Footnote ಯೋಹಾ 1:1; 8:58
  30. Footnote ಎಫೆ 1:2-23
  31. Footnote ಪ್ರಕ 3:14
  32. Footnote ಅ. ಕೃ. 26:23; 1 ಕೊರಿ 15:20; ಪ್ರಕ 1:5
  33. Footnote ಕೊಲೊ 2:9; ಯೋಹಾ 1:16; ಎಫೆ 1:23
  34. Footnote ಎಫೆ 2:14
  35. Footnote 2 ಕೊರಿ 5:18; ಎಫೆ 1:10
  36. Footnote ಎಫೆ 2:12,21
  37. Footnote ತೀತ 1:16
  38. Footnote ರೋಮಾ. 7:4
  39. Footnote 1 ಕೊರಿ 1:8
  40. Footnote ಯೂದ. 24; ಎಫೆ 5:27
  41. Footnote ಮಾರ್ಕ 16:15; ಅ. ಕೃ. 2:5
  42. Footnote ಕೊಲೊ 1:5,6
  43. Footnote 2 ಕೊರಿ 1:5; 2 ತಿಮೊ. 1:8; 2:10
  44. Footnote ಹಿಂಸೆ
  45. Footnote ಎಫೆ 4:12
  46. Footnote ವ. 24 ನೋಡಿರಿ.
  47. Footnote ಎಫೆ 3:2
  48. Footnote ಎಫೆ 3:9; ರೋಮಾ. 16:25-26
  49. Footnote ಎಫೆ 1:18; 3:16-17
  50. Footnote ಕೊಲೊ 2:2
  51. Footnote 1 ತಿಮೊ. 1:1;
  52. Footnote ಮತ್ತಾ 5:48
  53. Footnote ವ. 22 ನೋಡಿರಿ.
  54. Footnote ಎಫೆ 1:19
  55. Footnote ಕೊಲೊ 2:1; 4:12

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.