Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೊಲೊ 2

ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ, ಅವರ ಹೃದಯಗಳು ಉತ್ತೇಜನಗೊಂಡು, 1ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು 2ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. 3ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ. ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ. 4ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು 5ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು 6ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

ಕ್ರಿಸ್ತನು ನಿಜವಾದ ಜೀವವನ್ನು ಕೊಡುವಾತನು

7

ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ. 8ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು 9ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ. 10

ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು 11ಮನುಷ್ಯರ ಸಂಪ್ರದಾಯಗಳಿಗೆ ಮತ್ತು 12ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ. ದೇವರ ಸರ್ವಸಂಪೂರ್ಣತೆಯು 13ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ, 14ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ 15ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ. ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ 16ಪಾಪಸ್ವಭಾವವನ್ನು ತೆಗೆದುಹಾಕುವುದೇ. 17ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು 18ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ. ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ 19ಸತ್ತವರಾಗಿದ್ದ ನಿಮ್ಮನ್ನು 20ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. 21ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು. ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ 22ನಿರಾಯುಧರನ್ನಾಗಿ ಮಾಡಿ, ತನ್ನ 23ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.

ಹೀಗಿರುವುದರಿಂದ, 24ಅನ್ನಪಾನಗಳ ವಿಷಯದಲ್ಲಿಯೂ ಅಥವಾ 25ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ 26ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. 27ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ. 28ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, 29ದರ್ಶನಗಳಾದವೆಂದು ಕೊಚ್ಚಿಕೊಂಡು, 30ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ 31ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ. ಇಂಥವನು 32ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು 33ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, 34ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ, 35“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ 36ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ 37ಪದಾರ್ಥಗಳಿಗೆ ಅನುಸಾರವಾಗಿದೆ. ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, 38ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ 39ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

Source notes (39)
  1. Footnote ಕೊಲೊ 3:14
  2. Footnote ಕೊಲೊ 1:29; 4:12
  3. Footnote ಜ್ಞಾ. 2:1-5; ಯೆಶಾ 11:2, 45:3; 1 ಕೊರಿ 1:24, 30, 2:6-7
  4. Footnote 1 ಕೊರಿ 5:3
  5. Footnote 1 ಕೊರಿ 14:40
  6. Footnote 1 ಪೇತ್ರ 5:9
  7. Footnote ಕೊಲೊ 1:10; 1 ಥೆಸ. 4:2
  8. Footnote ಎಫೆ 3:18
  9. Footnote ಎಫೆ 4:21
  10. Footnote 1 ತಿಮೊ. 6:20; ಎಫೆ 5:6
  11. Footnote ಮತ್ತಾ 15:2
  12. Footnote ಕೊಲೊ 2:20; ಗಲಾ. 4:3
  13. Footnote ಕೊಲೊ 1:19; ಯೋಹಾ 1:14
  14. Footnote ಎಫೆ 1:21-22
  15. Footnote ಎಫೆ 3:19
  16. Footnote ಕೊಲೊ 3:9
  17. Footnote ರೋಮಾ. 6:3-4
  18. Footnote ಅ. ಕೃ. 2:24; 1 ಕೊರಿ 6:14; ಎಫೆ 1:19
  19. Footnote ಎಫೆ 2:1
  20. Footnote ಎಫೆ 2:5
  21. Footnote ರೋಮಾ. 7:4
  22. Footnote ನಿರಾಯುಧರಾಗಿ
  23. Footnote ಕ್ರಿಸ್ತನಲ್ಲಿ
  24. Footnote ರೋಮಾ. 14:17; ಇಬ್ರಿ. 9:10; ಯಾಜ 11:2
  25. Footnote ಯಾಜ 3:2; ರೋಮಾ. 14:5; ಮಾರ್ಕ 2:28
  26. Footnote ರೋಮಾ. 14:3; 10, 13
  27. Footnote ಇಬ್ರಿ. 8:5; 10:1
  28. Footnote ವ. 23
  29. Footnote ಯೆಹೆ. 13:7
  30. Footnote ರೋಮಾ. 8:7
  31. Footnote 1 ಕೊರಿ 9:24
  32. Footnote ಎಫೆ 4:15-16
  33. Footnote ರೋಮಾ. 6:4
  34. Footnote ಗಲಾ. 4:9
  35. Footnote ವ. 16; 1 ತಿಮೊ. 4:3; ಮತ್ತಾ 15:1-20; ಮಾರ್ಕ 7:1-23
  36. Footnote ಯೆಶಾ 29:13; ಮತ್ತಾ 15:9
  37. Footnote 1 ಕೊರಿ 6:13
  38. Footnote ವ. 18
  39. Footnote 1 ತಿಮೊ. 4:8

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.