Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೊಲೊ 4

ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

ಪ್ರಾರ್ಥಿಸಲು ಉತ್ತೇಜನ

1

ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ 2ನಾನು ಸೆರೆಯಲ್ಲಿದ್ದೇನಲ್ಲಾ. ನಾನು ಆ 3ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ. ಸಮಯವನ್ನು ಸದುಪಯೋಗಿಸಿಕೊಂಡು 4ಹೊರಗಿನವರೊಂದಿಗೆ 5ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ. ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ 6ರುಚಿಕರವಾಗಿಯೂ ಇರಲಿ. 7ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

ವಂದನೆಗಳು ಹಾಗೂ ಕಡೆ ಮಾತುಗಳು

8

ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು. ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ, ಅವನನ್ನು ನಂಬಿಗಸ್ತನು ಮತ್ತು9 ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ 10ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.

ನನ್ನ ಜೊತೆ ಸೆರೆಯವನಾದ 11ಅರಿಸ್ತಾರ್ಕನೂ ಮತ್ತು 12ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. 13ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ. ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. 14ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು. ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ 15ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು 16ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ. ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ. ಪ್ರಿಯ ವೈದ್ಯನಾಗಿರುವ 17ಲೂಕನು ಮತ್ತು 18ದೇಮನು ನಿಮಗೆ ವಂದನೆ ಹೇಳುತ್ತಾರೆ. ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ 19ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.

ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. 20ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ. 21ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. 22ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. 23ಕೃಪೆಯು ನಿಮ್ಮೊಂದಿಗಿರಲಿ.

Source notes (23)
  1. Footnote ವ. 2-4; ಎಫೆ 6:18-20
  2. Footnote ಕೊಲೊ 4:18; ಎಫೆ 6:20; ಫಿಲಿ. 1:7
  3. Footnote ರೋಮಾ. 16:25
  4. Footnote ಮಾರ್ಕ 4:11
  5. Footnote ಎಫೆ 5:15-17
  6. Footnote ಉಪ್ಪಾಗಿಯೂ
  7. Footnote 1 ಪೇತ್ರ 3:15
  8. Footnote ವ. 7-9; ಎಫೆ 6:21-22
  9. Footnote ಫಿಲೆ. 16
  10. Footnote ಫಿಲೆ. 10
  11. Footnote ಅ. ಕೃ. 19:29; 20:4; 7:2; ಫಿಲೆ. 24
  12. Footnote ಅ. ಕೃ. 15:37-39
  13. Footnote ಅ. ಕೃ. 12:12
  14. Footnote ಅ. ಕೃ. 11:2
  15. Footnote ಕೊಲೊ 1:7; ಫಿಲೆ. 23
  16. Footnote ಮತ್ತಾ 5:48
  17. Footnote 2 ತಿಮೊ. 4:11; ಅ. ರು. 16:10
  18. Footnote 2 ತಿಮೊ. 4:10; ಫಿಲೆ. 24
  19. Footnote ರೋಮಾ. 16:5
  20. Footnote ಫಿಲೆ. 2
  21. Footnote 1 ಕೊರಿ 16:21
  22. Footnote ಫಿಲಿ. 1:7; ಕೊಲೊ 4:3; ಇಬ್ರಿ. 13:3
  23. Footnote 1 ತಿಮೊ. 6:21; 2 ತಿಮೊ. 4:22; ತೀತ. 3:15; ಇಬ್ರಿ. 13:25

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.