Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಎಫೆ 5

ಪ್ರೀತಿಯಲ್ಲಿ ನಡೆಯಿರಿ

ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ 1ಆತನನ್ನು ಅನುಸರಿಸುವವರಾಗಿರಿ. 2ಕ್ರಿಸ್ತನು ನಮ್ಮನ್ನು ಪ್ರೀತಿಸಿ 3ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, 4ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ 5ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. 6

ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ 7ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. 8ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ 9ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 10ಜಾರನಿಗಾಗಲಿ, ದುರಾಚಾರಿಗಾಗಲಿ, 11ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. 12ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, 13ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.

ಏಕೆಂದರೆ 14ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. 15ಬೆಳಕಿನವರಂತೆ ನಡೆದುಕೊಳ್ಳಿರಿ. 16ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. 17ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. ನಿಷ್ಪ್ರಯೋಜಕವಾದ 18ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. 19ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ. 20ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ 21ಬಹಿರಂಗಪಡಿಸುವಂಥದ್ದು ಬೆಳಕೇ.

ಆದ್ದರಿಂದ, 22

“ನಿದ್ರೆ ಮಾಡುವವನೇ, ಎಚ್ಚರವಾಗು! 23

ಸತ್ತವರನ್ನು ಬಿಟ್ಟು ಏಳು!

ಆಗ 24ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ. 25

ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ 26ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ. ಮತ್ತು ಬುದ್ಧಿಹೀನರಾಗಿ ನಡೆಯದೆ 27ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ. 28ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ 29ಪವಿತ್ರಾತ್ಮಭರಿತರಾಗಿದ್ದು, 30ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ 31ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. ಕ್ರಿಸ್ತನಿಗೆ ಭಯಪಡುವವರಾಗಿದ್ದು, 32ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಗಂಡಹೆಂಡತಿಯರು

ಕೊಲೊ 3:18-4:1

33

ಸತಿಯರೇ, ನೀವು 34ಕರ್ತನಿಗೆ ಹೇಗೋ ಹಾಗೆಯೇ 35ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 36ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ 37ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. 38ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ 39ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ 40ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು 41ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ 42ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು 43ವಾಕ್ಯೋಪದೇಶ ಸಹಿತವಾದ 44ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. ಹಾಗೆಯೇ 45ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 46ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. “ಈ ಕಾರಣದಿಂದ 47ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. ಆದರೆ 48ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. 49ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

Source notes (49)
  1. Footnote ಎಫೆ 4:32; ಮತ್ತಾ 5:7, 48; ಲೂಕ 6:36 ನೋಡಿರಿ.
  2. Footnote ರೋಮಾ. 8:37:
  3. Footnote ರೋಮಾ. 4:25:
  4. Footnote ಇಬ್ರಿ. 7:27; 9:14; 10:10, 12:
  5. Footnote ರೋಮಾ. 14:15; ಕೊಲೊ 3:14; ಯೋಹಾ 13:34:
  6. Footnote 1 ಕೊರಿ 6:9, 18; ಗಲಾ. 5:19:
  7. Footnote ವ. 12 ನೋಡಿರಿ.
  8. Footnote ಎಫೆ 4:29:
  9. Footnote ವ. 20 ನೋಡಿರಿ.
  10. Footnote 1 ಕೊರಿ 6:9:
  11. Footnote ಕೊಲೊ 3:5:
  12. Footnote ಕೊಲೊ 2:8:
  13. Footnote ಕೊಲೊ 3:6; ರೋಮಾ. 1:18:
  14. Footnote ಎಫೆ 2:1, 2; ಅ. ಕೃ. 26:18:
  15. Footnote ಯೆಶಾ 2:5; ಯೋಹಾ 12:35,36:
  16. Footnote ಗಲಾ. 5:22:
  17. Footnote ರೋಮಾ. 12:2:
  18. Footnote ರೋಮಾ. 13:12; 6:21:
  19. Footnote ವ. 3:
  20. Footnote ಯೋಹಾ 3:20, 21; ಎಫೆ 5:9:
  21. Footnote ಅಥವಾ, ಪ್ರಕಟವಾಗುವಂತದೆಲ್ಲವೂ ಬೆಳಕೇ.
  22. Footnote ಯೆಶಾ 51:17; 52:1; 60. 1; ಮಲಾ. 4:2; ರೋಮಾ. 13:11:
  23. Footnote ಯೆಶಾ 26:19:
  24. Footnote ಲೂಕ 1:78, 79:
  25. Footnote ಕೊಲೊ 4:5:
  26. Footnote ಕೊಲೊ 4:5:
  27. Footnote ರೋಮಾ. 12:2; 1 ಥೆಸ. 4:3; 5:18:
  28. Footnote ಜ್ಞಾ. 20:1; 23:20,21; 1 ಕೊರಿ 5:11:
  29. Footnote ಲೂಕ 1:15:
  30. Footnote ಅ. ಕೃ. 16:25; ಕೊಲೊ 3 16; ಯಾಕೋಬ 5:13; 1 ಕೊರಿ 14:26:
  31. Footnote ಇಬ್ರಿ. 13:15; ಕೊಲೊ 3:17:
  32. Footnote ಫಿಲಿ. 2:3:
  33. Footnote ಎಫೆ 5:22-6 9; ಕೊಲೊ 3:18, 4:1.
  34. Footnote ಎಫೆ 6:5:
  35. Footnote ಆದಿ 3:16:
  36. Footnote ಎಫೆ 1:22, 23:
  37. Footnote 1 ಕೊರಿ 11:3:
  38. Footnote 1 ಕೊರಿ 6:13:
  39. Footnote ಎಫೆ 5:28, 33; ಕೊಲೊ 3:19; 1 ಪೇತ್ರ 3:7:
  40. Footnote ವ. 2 ನೋಡಿರಿ.
  41. Footnote ಗೀತೆ. 4:7:
  42. Footnote 2 ಕೊರಿ 11:2; ಎಫೆ 1:4:
  43. Footnote ಯೋಹಾ 15:3:
  44. Footnote ತೀತ. 3:5; ಪ್ರಕ 7:14:
  45. Footnote ಎಫೆ 5:25, 33:
  46. Footnote ಆದಿ 2:23; 1 ಕೊರಿ 6:15:
  47. Footnote ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16:
  48. Footnote ಎಫೆ 5:25, 28:
  49. Footnote 1 ಪೇತ್ರ. 3:2, 6:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.