Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಎಫೆ 6

ತಂದೆತಾಯಿಗಳೂ ಮಕ್ಕಳೂ

1

ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, 2“ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.” 3

ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ಯಜಮಾನರೂ ದಾಸರೂ

4

ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ 5ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ. 6ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ. ಯಾಕೆಂದರೆ 7ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ 8ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.

ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. 9ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ 10ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.

ದೇವರ ಸರ್ವಾಯುಧಗಳು

ಕಡೆಯದಾಗಿ, ನೀವು 11ಕರ್ತನಲ್ಲಿಯೂ 12ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ 13ಸರ್ವಾಯುಧಗಳನ್ನು 14ಧರಿಸಿಕೊಳ್ಳಿರಿ. ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. 15ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, 16ಈ ಅಂಧಕಾರದ 17ಲೋಕಾಧಿಪತಿಗಳ ಮೇಲೆಯೂ, 18ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 19ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, 20ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, 21ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ 22ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು 23ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. ಇದಲ್ಲದೆ 24ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು 25ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. ನೀವು 26ಪವಿತ್ರಾತ್ಮಪ್ರೇರಿತರಾಗಿ 27ಎಲ್ಲಾ ಸಮಯಗಳಲ್ಲಿ 28ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ 29ವಿಜ್ಞಾಪನೆಮಾಡುತ್ತಾ 30ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ 31ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು 32ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ನಿಮಿತ್ತವಾಗಿ 33ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ 34ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.

ಕಡೆ ಮಾತುಗಳು

35

ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ 36ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು. ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.

ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ 37ಶಾಂತಿಯೂ, ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರೆಲ್ಲರಿಗೆ ಉಂಟಾಗಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ 38ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.

Source notes (38)
  1. Footnote ಜ್ಞಾ. 1:8; 6:20; 23:22; ಕೊಲೊ 3:20:
  2. Footnote ವಿಮೋ 20:12; ಧರ್ಮೋ 5:16:
  3. Footnote ಆದಿ 18:19; ಧರ್ಮೋ 4:9; 6:7; 11:19; ಜ್ಞಾ. 19:18; 22:6; 29:17 ಇತ್ಯಾದಿ.
  4. Footnote ಅಥವಾ. ಗುಲಾಮರೇ, ದಾಸರೇ. ಕೊಲೊ 3:22; ತಿಮೊ. 6:1; 1 ಪೇತ್ರ. 2:18:
  5. Footnote ಎಫೆ 5:22:
  6. Footnote ಗಲಾ. 1:10.
  7. Footnote ಗಲಾ. 3:28. ಕೊಲೊ 3:11.
  8. Footnote ಕೀರ್ತ 62:12.
  9. Footnote ಯೋಹಾ 13:13. ಯೋಬ. 31:13-15.
  10. Footnote ರೋಮಾ. 2:11; ಗಲಾ. 2:6:
  11. Footnote 2 ತಿಮೊ. 2:1; 1 ಯೊಹಾ. 2:14; ಎಫೆ 3:16:
  12. Footnote ಎಫೆ 1:19:
  13. Footnote ಎಫೆ 6:13; 2 ಕೊರಿ 10:4:
  14. Footnote ವ. 14. ರೋಮಾ. 13:12:
  15. Footnote ಎಫೆ 1:21:
  16. Footnote ಲೂಕ 22:53; ಕೊಲೊ 1:13:
  17. Footnote ಎಫೆ 2:2:
  18. Footnote ಎಫೆ 3:10:
  19. Footnote 1 ಪೇತ್ರ. 1:13; ಯೆಶಾ 11:5
  20. Footnote ಯೆಶಾ 59:17; 1 ಥೆಸ. 5:8; ಯೆಶಾ 61:10; 2 ಕೊರಿ 6:7:
  21. Footnote ಯೆಶಾ 52:7; ರೋಮಾ. 10:15:
  22. Footnote 1 ಯೊಹಾ. 5:4:
  23. Footnote ಮತ್ತಾ 13:19; 1 ಯೊಹಾ. 2:14:
  24. Footnote ಯೆಶಾ 59:17; 1 ಥೆಸ. 5:8:
  25. Footnote ಇಬ್ರಿ. 4:12; ಯೆಶಾ 11:4; 49:2:
  26. Footnote ಯೂದ. 20:
  27. Footnote ಲೂಕ 18:1:
  28. Footnote ಕೊಲೊ 4:2-4:
  29. Footnote 1 ತಿಮೊ. 2:1:
  30. Footnote ಮಾರ್ಕ 13:33:
  31. Footnote ಎಫೆ 4:3.
  32. Footnote ಕೊಲೊ 4:3; 1 ಥೆಸ. 5:25; 2 ಥೆಸ. 3:1.
  33. Footnote 2 ಕೊರಿ 5:20.
  34. Footnote ಅ. ಕೃ. 28:20.
  35. Footnote ಕೊಲೊ 4:7-9:
  36. Footnote ಅ. ಕೃ. 20:4. 2 ತಿಮೊ. 4:12; ತೀತ. 3:12:
  37. Footnote ಗಲಾ. 6:16; ಥೆಸ. 3:16:
  38. Footnote 1 ಕೊರಿ 16:22

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.