Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಗಲಾ 2

ಪೌಲನನ್ನು ಇತರ ಅಪೊಸ್ತಲರು ಅಂಗೀಕರಿಸಿದ್ದು

1

ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು. ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, 2ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ 3ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು 4ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು. ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ 5ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ. 6ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ 7ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ 8ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.

ಆದರೆ 9ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. 10ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು 11ನನಗೇನನ್ನೂ ತಿಳಿಸಿಕೊಡಲಿಲ್ಲ. ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, 12ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು. 13ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, 14ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು. ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, 15ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.

ಪೌಲನು ಅಂತಿಯೋಕ್ಯದಲ್ಲಿ ಪೇತ್ರನನ್ನು ಖಂಡಿಸಿದ್ದು

16

ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು 17ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ 18ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು 19ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”

ಯೆಹೂದ್ಯರಂತೆ ಅನ್ಯಜನರು ಸಹ ನಂಬಿಕೆಯಿಂದ ರಕ್ಷಣೆಹೊಂದಿದ್ದಾರೆ

ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.” ಯಾವನಾದರೂ 20ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ 21ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ 22ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ. ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ. ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ. ನಾನು ಸಹ 23ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, 24ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. 25ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು. ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. 26ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

Source notes (26)
  1. Footnote ಅ. ಕೃ. 15:2
  2. Footnote 1 ತಿಮೊ. 3:16
  3. Footnote ಗಲಾ. 2:6-9
  4. Footnote ಮೂಲ: ಓಡುತ್ತಿರುವುದು ಅಥವಾ ಓಡಿದ್ದು.
  5. Footnote ಅ. ಕೃ. 16:3 ಹೋಲಿಸಿ
  6. Footnote ಅ. ಕೃ. 15:24, 2 ಕೊರಿ 11:26
  7. Footnote ಗಲಾ. 4:3,9; 9:24-25, 2 ಕೊರಿ 11:20, ರೋಮಾ. 8:15
  8. Footnote ಗಲಾ. 5:1
  9. Footnote ವ. 29 ನೋಡಿರಿ
  10. Footnote ಧರ್ಮೋ 10:17, ರೋಮಾ. 2:11
  11. Footnote 2 ಕೊರಿ 11:5, 12:11
  12. Footnote ಗಲಾ. 1:16, ಅ. ಕೃ. 9:15, ಥೆಸ. 2:4, 1 ತಿಮೊ. 1:11
  13. Footnote ಯೆರೆ 1:18, ಪ್ರಕ 3:12
  14. Footnote 2 ಪೇತ್ರ. 3:15
  15. Footnote ಅ. ಕೃ. 24:17
  16. Footnote ಅ. ಕೃ. 15:1,35
  17. Footnote ಅ. ಕೃ. 11:3, ಲೂಕ 15:2
  18. Footnote ಅ. ಕೃ. 11:2
  19. Footnote ವ. 12 ನೋಡಿರಿ
  20. Footnote ರೋಮಾ. 9:30
  21. Footnote ಗಲಾ. 3:11, ಅ. ಕೃ. 13:39
  22. Footnote ಕೀರ್ತ 143:2, ರೋಮಾ. 3:20
  23. Footnote ಗಲಾ. 5:24, 6:14, ರೋಮಾ. 6:6
  24. Footnote ಯೋಹಾ 17:23
  25. Footnote ರೋಮಾ. 8:37
  26. Footnote ಗಲಾ. 3:21, ಇಬ್ರಿ. 7:11

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.