ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಗಲಾ 6
ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ
ಸಹೋದರರೇ, 1ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ 2ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ 3ನೀತಿನಿಯಮಗಳನ್ನು ನೆರವೇರಿಸಿರಿ. 4ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ. 5ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ. ಏಕೆಂದರೆ 6ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು. 7
ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು. ಮೋಸಹೋಗಬೇಡಿರಿ. 8ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. 9ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ 10ಶರೀರಭಾವವನ್ನು ಕುರಿತು ಬಿತ್ತುವವನು 11ಆ ಭಾವದಿಂದ ನಾಶವನ್ನು ಕೊಯ್ಯುವನು. 12ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. 13ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ 14ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ಕಡೆ ಎಚ್ಚರಿಕೆಗಳು ಮತ್ತು ವಂದನೆಗಳು
ಇಗೋ ನೋಡಿರಿ, 15ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ. ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. 16ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ. ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. 17ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ 18ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು. 19ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ 20ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು. ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ 21ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.
ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, 22ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ. ಸಹೋದರರೇ, 23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು 24ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
Source notes (24)
- Footnote 2 ಕೊರಿ 2:7, ಇಬ್ರಿ. 12:13, ಯಾಕೋಬ. 5:19
- Footnote ರೋಮಾ. 15:1
- Footnote ಧರ್ಮಶಾಸ್ತ್ರವನ್ನು, ಗಲಾ. 5:14
- Footnote 1 ಕೊರಿ 3:18
- Footnote 1 ಕೊರಿ 11:28, 2 ಕೊರಿ 13:5
- Footnote ರೋಮಾ. 14:12
- Footnote ರೋಮಾ. 15:27, 1 ಕೊರಿ 9:11
- Footnote ಯೋಬ. 13:9
- Footnote 2 ಕೊರಿ 9:6
- Footnote ಶರೀರಭಾವದಲ್ಲಿ, ಹೋಶೇ. 8:7, ಯೋಬ. 4:8
- Footnote ರೋಮಾ. 6:21
- Footnote ಯಾಕೋಬ. 3:18
- Footnote 2 ಥೆಸ. 3:13, 1 ಕೊರಿ 15:58
- Footnote ಎಫೆ 2:19, ಇಬ್ರಿ. 3:6
- Footnote 1 ಕೊರಿ 16:21
- Footnote ಗಲಾ. 5:11
- Footnote 1 ಕೊರಿ 2:2, ಫಿಲಿ. 3:3, 7-8
- Footnote ರೋಮಾ. 6:6
- Footnote ರೋಮಾ. 2:28, ಗಲಾ. 5:6
- Footnote ಯೋಹಾ 3:5-7, ರೋಮಾ. 6:4, 2 ಕೊರಿ 5:17
- Footnote ಗಲಾ. 3:7-9,29; ರೋಮಾ. 2:29, 4:12, 9:6-8
- Footnote ಯೆಶಾ 44:5, ಯೆಹೆ. 9:4, ಪ್ರಕ 13:16
- Footnote ಫಿಲೆ. 25, ರೋಮಾ. 16:20
- Footnote 2 ತಿಮೊ. 4:22
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.