Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಇಬ್ರಿ 1

ದೇವರು ತನ್ನ ಮಗನ ಮೂಲಕ ಮಾತನಾಡಿದ್ದು

ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. ಆದರೆ 1ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ 2ಮಗನ ಮುಖಾಂತರ ಮಾತನಾಡಿದ್ದಾನೆ. 3ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ 4ಇಡೀ ವಿಶ್ವವನ್ನು ಉಂಟುಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ, 5ಆತನ ವ್ಯಕ್ತಿತ್ವದ ಪ್ರತಿರೂಪವೂ, 6ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ 7ಪಾಪಗಳನ್ನು ಶುದ್ಧಿಮಾಡಿ, 8ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಯೇಸು ದೇವರ ಮಗನಾಗಿದ್ದು ದೇವದೂತರಿಗಿಂತಲೂ ಶ್ರೇಷ್ಠನು

ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. 9ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು. ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?,

“ನೀನು 10ನನ್ನ ಮಗನು,

ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” 11

“ನಾನು ಅವನಿಗೆ ತಂದೆಯಾಗಿರುವೆನು,

ಅವನು ನನಗೆ ಮಗನಾಗಿರುವನು.” 12

ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ 13

“ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

ದೇವದೂತರ ವಿಷಯದಲ್ಲಿ, 14

“ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ,

ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.

ಆದರೆ ಮಗನ ವಿಷಯದಲ್ಲಿಯಾದರೋ,

“ದೇವರೇ 15ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು.

ನೀತಿದಂಡವೇ ನಿನ್ನ ರಾಜದಂಡವಾಗಿದೆ.

ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ.

ಆದುದರಿಂದ ದೇವರು, ನಿನ್ನ ದೇವರೇ,

ನಿನ್ನನ್ನು ನಿನ್ನ ಜೊತೆಗಾರರಿಗಿಂತ 16ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. 17

“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ.

ಆಕಾಶವು ನಿನ್ನ ಕೈಕೆಲಸವಾಗಿದೆ,

ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ.

ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.

ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು

ಅವು ವಸ್ತ್ರದಂತೆ ಬದಲಾಗುವವು. 18

ನೀನಾದರೂ ಅನನ್ಯನು.

ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.

ಆದರೆ ಯಾವ ದೇವದೂತನಿಗಾದರೂ ದೇವರು, 19

“ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ

ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?

ಈ ಎಲ್ಲಾ ದೇವದೂತರು ರಕ್ಷಣೆಯನ್ನು 20ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ 21ಸೇವಕಾತ್ಮಗಳಲ್ಲವೋ?

Source notes (21)
  1. Footnote 1 ಪೇತ್ರ. 1:20; ಇಬ್ರಿ. 9:26; ಅ. ಕೃ. 2:17:
  2. Footnote ಇಬ್ರಿ. 3:6; 4:14; 5:8:
  3. Footnote ಕೀರ್ತ 2:8; ಮತ್ತಾ 21:38; 28:18:
  4. Footnote ಮೂಲ: ಯುಗಗಳನ್ನು. ಯೋಹಾ 1:3:
  5. Footnote 2 ಕೊರಿ 4:4:
  6. Footnote ಇಬ್ರಿ. 11:3; ಕೊಲೊ 1:17:
  7. Footnote ಇಬ್ರಿ. 9:14:
  8. Footnote ಮಾರ್ಕ 16:19; ಲೂಕ 22:69:
  9. Footnote ಎಫೆ 1:21; ಫಿಲಿ. 2:9:
  10. Footnote ಕೀರ್ತ 2:7; ಇಬ್ರಿ. 5:5; ಅ. ಕೃ. 13:33:
  11. Footnote 2 ಸಮು 7:14; ಕೀರ್ತ 89:26,27:
  12. Footnote ಅಥವಾ, ಹಾಗೆ ಹೇಳದೆ ಆತನು ತನ್ನ ಚೊಚ್ಚಲ ಮಗನನ್ನು ಭೂಲೋಕದೊಳಗೆ ಬರಮಾಡುವಾಗ.
  13. Footnote ಧರ್ಮೋ 32:43; ಕೀರ್ತ 97:7:
  14. Footnote ಕೀರ್ತ 104:4:
  15. Footnote ಕೀರ್ತ 45:6,7:
  16. Footnote ಯೆಶಾ 61:1,3:
  17. Footnote ಕೀರ್ತ 102:25-27:
  18. Footnote ಇಬ್ರಿ. 13:8:
  19. Footnote ಕೀರ್ತ 110:1; ಇಬ್ರಿ. 10:13:
  20. Footnote ಮತ್ತಾ 19:29; 25:34; ರೋಮಾ. 8:17; ಯಾಕೋಬ 2:5; ಪ್ರಕ 21:7:
  21. Footnote ಆದಿ 19:16; ನ್ಯಾಯ 6:11; ದಾನಿ. 3:28; ಅ. ಕೃ. 12:7:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.