Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಇಬ್ರಿ 10

ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ 1ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು 2ಎಂದಿಗೂ ಪರಿಪೂರ್ಣತೆಗೆ ತರಲಾರದು. ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ. ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ 3ಪಾಪಗಳ ಜ್ಞಾಪಕವಾಗುವುದುಂಟು, ಯಾಕೆಂದರೆ 4ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, 5

“(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ,

ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,

ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.

ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ

ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.

ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ. ತರುವಾಯ ಆತನು 6“ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. ಯೇಸು ಕ್ರಿಸ್ತನು 7ಒಂದೇ ಸಾರಿ 8ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ 9ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ಇದಲ್ಲದೆ ಪ್ರತಿಯೊಬ್ಬ ಯಾಜಕನು 10ಪ್ರತಿದಿನ ಸೇವೆಮಾಡುತ್ತಾ, 11ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ 12ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ 14ಪರಿಪೂರ್ಣರನ್ನಾಗಿ ಮಾಡಿದ್ದಾನೆ.

ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ, 15

“ಆ ದಿನಗಳು ಬಂದ ಮೇಲೆ

ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,

ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು,

ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.”

ಎಂಬುದಾಗಿ ಹೇಳಿದ ತರುವಾಯ ಇನ್ನು, 16“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.

ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ

17

ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ 18ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ 19ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. ಮತ್ತು 20ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, 21ತಿಳಿನೀರಿನಿಂದ ತೊಳೆದ ದೇಹದಿಂದಲೂ, 22ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ. ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ 23ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ 24ವಾಗ್ದಾನ ಮಾಡಿದಾತನು ನಂಬಿಗಸ್ತನು. ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ 25ಒಬ್ಬರನ್ನೊಬ್ಬರು ಹುರಿದುಂಬಿಸೋಣ. 26ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, 27ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.

ನಾವು 28ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ 29ಬೇಕೆಂದು ಪಾಪಮಾಡಿದರೆ 30ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ 31ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ 32ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. 33ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ 34ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. ಹೀಗಿರುವಲ್ಲಿ, 35ದೇವಕುಮಾರನನ್ನು ತುಳಿದು, 36ತನ್ನನ್ನು ಶುದ್ಧೀಕರಿಸಿದ 37ಒಡಂಬಡಿಕೆಯ ರಕ್ತವನ್ನು 38ಅಶುದ್ಧವೆಂದೆಣಿಸಿ, 39ದೇವರ ಕೃಪಾವರವಾಗಿರುವ ಆತ್ಮನನ್ನು 40ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? 41“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ 42“ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ. 43ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.

ಹೀಗಿರಲಾಗಿ 44ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ 45ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ 46ಹಾಸ್ಯಕ್ಕೆ ಗುರಿಯಾದಿರಿ. 47ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ. ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ 48ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ 49ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ. ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ 50ಮಹಾ ಪ್ರತಿಫಲ ಉಂಟು. ನೀವು 51ದೇವರ ಚಿತ್ತವನ್ನು ನೆರವೇರಿಸಿದ ಮೇಲೆ 52ವಾಗ್ದಾನವನ್ನು ಹೊಂದಬೇಕಾದರೆ 53ನಿಮಗೆ ತಾಳ್ಮೆಯು ಅವಶ್ಯವಾಗಿದೆ. 54

“ಬರುವಾತನು 55ಇನ್ನು ಸ್ವಲ್ಪ ಕಾಲದಲ್ಲಿ

ಬರುವನು ತಡಮಾಡುವುದಿಲ್ಲ.

ಆದರೆ ನನ್ನವನಾಗಿರುವ 56ನೀತಿವಂತನು ನಂಬಿಕೆಯಿಂದಲೇ ಬದುಕುವನು,

ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”

ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

Source notes (56)
  1. Footnote ಇಬ್ರಿ. 8:5; ಕೊಲೊ 2:17:
  2. Footnote ಇಬ್ರಿ. 9:9:
  3. Footnote ಇಬ್ರಿ. 9:7; ಯಾಜ 16:21:
  4. Footnote ವ. 11. ಯೆಶಾ 1:11-15; ಮೀಕ. 6:6-8:
  5. Footnote ಕೀರ್ತ 40. 6-8
  6. Footnote ವ. 7:
  7. Footnote ಇಬ್ರಿ. 7:27; 9:12:
  8. Footnote ಮತ್ತಾ 26:26; ಮಾರ್ಕ 14:22; ಲೂಕ 22:19; 1 ಕೊರಿ 11:24:
  9. Footnote ಇಬ್ರಿ. 10:5; 2:11; 13:12:
  10. Footnote ಅರಣ್ಯ 28:3:
  11. Footnote ಇಬ್ರಿ. 9:9; 10:1, 4:
  12. Footnote ಇಬ್ರಿ. 1:3; ಮಾರ್ಕ 16:19:
  13. Footnote ಕೀರ್ತ 110:1; ಇಬ್ರಿ. 1:13. 1 ಕೊರಿ 15:25-28:
  14. Footnote ವ. 1:
  15. Footnote ಯೆರೆ 31:33; ಇಬ್ರಿ. 8:10; ರೋಮಾ. 11:27:
  16. Footnote ಯೆರೆ 31:34; ಇಬ್ರಿ. 8:12:
  17. Footnote ಇಬ್ರಿ. 9:8; ಯೋಹಾ 10:9; 14:6.
  18. Footnote ಇಬ್ರಿ. 9:3:
  19. Footnote ಇಬ್ರಿ. 4:16:
  20. Footnote ಜೆಕ. 6:11-13; ಇಬ್ರಿ. 2:17; 4:14:
  21. Footnote ಇಬ್ರಿ. 9:14:
  22. Footnote ಯೆಹೆ. 36:25; ಇಬ್ರಿ. 12:24. 2 ಕೊರಿ 7:1; 1 ಪೇತ್ರ 1:2:
  23. Footnote ಇಬ್ರಿ. 4:14:
  24. Footnote ಇಬ್ರಿ. 11:11; 1 ಕೊರಿ 1:9:
  25. Footnote ಇಬ್ರಿ. 3:13:
  26. Footnote ಅ. ಕೃ. 2:42:
  27. Footnote ರೋಮಾ. 13:11-13; ಯಾಕೋಬ 5:8:
  28. Footnote ಇಬ್ರಿ. 6:4; 2 ಪೇತ್ರ. 2:20, 21:
  29. Footnote ಅರಣ್ಯ 15:30; ಧರ್ಮೋ 17:12:
  30. Footnote ಇಬ್ರಿ. 6:6; 1 ಯೋಹಾ 5:16:
  31. Footnote ಇಬ್ರಿ. 2:3; 12:25:
  32. Footnote ಯೆಶಾ 26:11; ಚೆಫ. 1:18; 3:8. 2 ಥೆಸ. 1:8:
  33. Footnote ಧರ್ಮೋ 17:2-6:
  34. Footnote ಅರಣ್ಯ 35:30.
  35. Footnote ಇಬ್ರಿ. 6:6:
  36. Footnote ಇಬ್ರಿ. 9:13, 14:
  37. Footnote ಇಬ್ರಿ. 13:20; ಜೆಕ. 9:11:
  38. Footnote ಮೂಲ. ಸಾಧಾರಣವೆಂದೆಣಿಸಿ.
  39. Footnote ಮೂಲ. ಕೃಪೆಯ ಆತ್ಮನನ್ನು.
  40. Footnote ಮತ್ತಾ 12:31, 32; ಎಫೆ 4:30.
  41. Footnote ಧರ್ಮೋ 32:35; ರೋಮಾ. 12:19:
  42. Footnote ಧರ್ಮೋ 32:36; ಕೀರ್ತ 50. 4:
  43. Footnote ಯೆಶಾ 33:14; ಲೂಕ 12:5:
  44. Footnote ಇಬ್ರಿ. 6:4:
  45. Footnote ಫಿಲಿ. 1:30.
  46. Footnote 1 ಕೊರಿ 4:9:
  47. Footnote ಇಬ್ರಿ. 13:3; ಮತ್ತಾ 25:36; 2 ತಿಮೊ. 1:16:
  48. Footnote 1 ಪೇತ್ರ. 1:14:
  49. Footnote ಮತ್ತಾ 5:12:
  50. Footnote ಇಬ್ರಿ. 2:2; 11:26:
  51. Footnote ಇಬ್ರಿ. 13:21:
  52. Footnote ಇಬ್ರಿ. 11:39:
  53. Footnote ಇಬ್ರಿ. 12:1-7; ಲೂಕ 21:19; ರೋಮಾ. 2:7; 12:12; ಮತ್ತಾ 10:22:
  54. Footnote ಹಬ 2:3, 4:
  55. Footnote ಹಗ್ಗಾ. 2:6; ಲೂಕ 18:8:
  56. Footnote ರೋಮಾ. 1:17; ಗಲಾ. 3:11:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.