ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಇಬ್ರಿ 12
ದೇವರು ನಮ್ಮ ತಂದೆ
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ 1ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, 2ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ 3ಓಟವನ್ನು ಸಹನೆಯಿಂದ ಓಡೋಣ. 4ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ 5ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, 6ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ. ನೀವು ಮನಗುಂದಿದವರಾಗಿ 7ಬೇಸರಗೊಳ್ಳದಂತೆ 8ಯೇಸುವನ್ನು ಕುರಿತು ಯೋಚಿಸಿರಿ. 9ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು. ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ. ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ,
“ನನ್ನ 10ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
ಏಕೆಂದರೆ 11ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ.
ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. 12ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಎಲ್ಲರೂ ಪಾಲುಗಾರರಬೇಕಾದ 13ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ 14ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ 15ಜೀವಿಸಬೇಕಲ್ಲವೇ? ನಮ್ಮ ಲೌಕಿಕ ತಂದೆಗಳು 16ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ 17ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ 18ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ 19ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ. ಆದುದ್ದರಿಂದ 20ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ. 21ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
ದೇವರ ಕೃಪೆಯನ್ನು ತಿರಸ್ಕರಿಸುವುದರ ಬಗ್ಗೆ ಎಚ್ಚರಿಕೆ
ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು 23ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ. ನಿಮ್ಮಲ್ಲಿ ಯಾವನೂ 24ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, 25ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ. ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. 26ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು. 27ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ 28ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
ನೀವು 29ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, 30ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ 31 ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು. ಏಕೆಂದರೆ, 32“ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ. ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, 33“ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು.
ಆದರೆ ನೀವು 34ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ 35ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ 36ಕೋಟ್ಯಾನುಕೋಟಿ ದೇವದೂತರ ಬಳಿಗೂ, ಪರಲೋಕದಲ್ಲಿ 37ಹೆಸರು ಬರೆಸಿಕೊಂಡಿರುವ 38ಚೊಚ್ಚಲ ಮಕ್ಕಳ ಸಭೆಗೂ, 39ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ, 40ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, 41ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ 42ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ 43ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು? 44ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, 45“ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ. “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. 46ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. ಆದ್ದರಿಂದ 47ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು 48ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ. ಏಕೆಂದರೆ 49ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
Source notes (49)
- Footnote ಎಫೆ 4:22:
- Footnote ಇಬ್ರಿ. 2:10:
- Footnote 1 ಕೊರಿ 9:24:
- Footnote ಲೂಕ 24:26; ಫಿಲಿ. 2:8; ಯೆಶಾ 53:11:
- Footnote ಕೀರ್ತ 22:6,7; 69:19; ಯೆಶಾ 53:3:
- Footnote ಇಬ್ರಿ. 1:3:
- Footnote ಗಲಾ. 6:9:
- Footnote ಮತ್ತಾ 10:24:
- Footnote ಕೆಲವು ಪ್ರತಿಗಳಲ್ಲಿ, ಪಾಪಿಗಳು ತಮ್ಮ ಸ್ವಂತ ಹಾನಿಗೆ ಮಾಡಿದ ವಿರೋಧವನ್ನು ಎಷ್ಟಾಗಿ ಸಹಿಸಿಕೊಂಡನು ಎಂದು ಬರೆದದೆ.
- Footnote ಜ್ಞಾ. 3:11,12; ಯೋಬ 5:17:
- Footnote ಕೀರ್ತ 94:12; 119:67,75; ಪ್ರಕ 3:19:
- Footnote ಧರ್ಮೋ 8:5; 2 ಸಮು 7:14; ಜ್ಞಾ. 13:24:
- Footnote 1 ಪೇತ್ರ. 5:9:
- Footnote ಅರಣ್ಯ 16:22:
- Footnote ಯೆಶಾ 38:16:
- Footnote ಅಥವಾ, ಕೆಲವು ದಿನಗಳ ತನಕ.
- Footnote 2 ಪೇತ್ರ. 1:4; ಯಾಜ 11:44:
- Footnote 1 ಪೇತ್ರ. 1:6:
- Footnote ಯಾಕೋಬ. 3:17,18:
- Footnote ಯೆಶಾ 35:3; ಯೋಬ. 4:3,4:
- Footnote ಜ್ಞಾ. 4:26,27:
- Footnote ರೋಮಾ. 14:19:
- Footnote 1 ಥೆಸ. 4:7:
- Footnote ಇಬ್ರಿ. 4:1; 2 ಕೊರಿ 6:1; ಗಲಾ. 5:4:
- Footnote ಧರ್ಮೋ 29:18; ಅ. ಕೃ. 8:23:
- Footnote ಆದಿ 25:33:
- Footnote ಆದಿ 27:34,36,38.
- Footnote ಅಥವಾ. ಮಾನಸಾಂತರಕ್ಕೆ.
- Footnote ವಿಮೋ 19:18; 20:18; ಧರ್ಮೋ 4:11; 5:22:
- Footnote ವಿಮೋ 19:16,19:
- Footnote ವಿಮೋ 20:19; ಧರ್ಮೋ 5:5,23,25; 18:16:
- Footnote ವಿಮೋ 19:12,13:
- Footnote ವಿಮೋ 19:16; ಧರ್ಮೋ 9:19:
- Footnote ಪ್ರಕ 14:1:
- Footnote ಗಲಾ. 4:26:
- Footnote ಯೂದ. 14:
- Footnote ಲೂಕ 10:20:
- Footnote ಇಬ್ರಿ. 2:12:
- Footnote ಆದಿ 18:25; ಕೀರ್ತ 58:11:
- Footnote ಇಬ್ರಿ. 8:6; 9:15
- Footnote ಇಬ್ರಿ. 11:4; ಆದಿ 4:10:
- Footnote ಇಬ್ರಿ. 10:22:
- Footnote ಅರಣ್ಯ 16:24-35; ಇಬ್ರಿ. 2:3:
- Footnote ವಿಮೋ 19:18:
- Footnote ಹಗ್ಗಾ. 2:6:
- Footnote ಕೀರ್ತ 102:26:
- Footnote ದಾನಿ. 2:44:
- Footnote ಅಥವಾ, ದೇವರ ಕೃಪೆಯನ್ನು ಹಿಡಿದುಕೊಂಡು.
- Footnote ಧರ್ಮೋ 4:24; 2 ಥೆಸ. 1:8:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.