Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಇಬ್ರಿ 8

ಯೇಸುವಿನ ಯಾಜಕತ್ವವು ಶಾಶ್ವತವಾದದ್ದು

ನಾವು ಈಗ ಹೇಳುವ ಸಂಗತಿಗಳಲ್ಲಿ 1ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ 2ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ 3ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. 4

ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ 5ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ. ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು 6ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ 7ಪ್ರತಿರೂಪವೂ, 8ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಯೇಸು ಕ್ರಿಸ್ತನು ಅದಕ್ಕಿಂತ 9ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ 10ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. 11

ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, 12

“‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ

ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.

‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ.

ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. 13

‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು,

‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು.

ನಾನು 14ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು.

ನಾನು ಅವರಿಗೆ ದೇವರಾಗಿರುವೆನು.

ಅವರು ನನ್ನ ಜನರಾಗಿರುವರು.

ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ

“ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ.

ಏಕೆಂದರೆ 15ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.

ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು

ಮತ್ತು 16ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.

ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು 17ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.

Source notes (17)
  1. Footnote ಅಥವಾ, ಮಾತೇನಂದರೆ, ಇಂಥ ಮಹಾಯಾಜಕನೇ ನಮಗಿದ್ದಾನೆ; ಈತನು ಪರಲೋಕದೊಳಗೆ ಬಲಪಾರ್ಶ್ವದಲ್ಲಿ ಕುಳಿತಿದ್ದು ಪವಿತ್ರಸ್ಥಾನದಲ್ಲಿ.
  2. Footnote ಮಾರ್ಕ 16:19:
  3. Footnote ಇಬ್ರಿ. 9:11, 24:
  4. Footnote ಇಬ್ರಿ. 5:1:
  5. Footnote ಇಬ್ರಿ. 9:12-14; 10:9-12; ಎಫೆ 5:2:
  6. Footnote ವಿಮೋ 25:40.
  7. Footnote ಇಬ್ರಿ. 9:23:
  8. Footnote ಇಬ್ರಿ. 10:1; ಕೊಲೊ 2:17:
  9. Footnote ಇಬ್ರಿ. 1:4; 2 ಕೊರಿ 3:6-11:
  10. Footnote ಇಬ್ರಿ. 7:22:
  11. Footnote ಇಬ್ರಿ. 7:11:
  12. Footnote ಯೆರೆ 31:31-34:
  13. Footnote ಇಬ್ರಿ. 10:16; ರೋಮಾ. 11:27:
  14. Footnote 2 ಕೊರಿ 3:3:
  15. Footnote ಯೆಶಾ 54:13; ಯೋಹಾ 6:45; 1 ಯೋಹಾ 2:27:
  16. Footnote ಇಬ್ರಿ. 10:17; ರೋಮಾ. 11:27:
  17. Footnote 2 ಕೊರಿ 5:17:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.