Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಹೋಶೇ 14

ದೇವರ ಪ್ರೀತಿಪೂರ್ವಕವಾದ ವಾಗ್ದಾನಗಳು

ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ;

ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು

ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು;

ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.1

ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ,

ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ,

ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ;

ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.

ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು;

ನನ್ನ ಕೋಪವು ಅವರಿಂದ ತೊಲಗಿಹೋಯಿತು.

ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು;

ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು,

ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.

ಅದರ ನೆರಳನ್ನು ಆಶ್ರಯಿಸಿರುವವರು2 ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು;

ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.

ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು;

ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ;

ನನ್ನಿಂದಲೇ ನೀನು ಫಲಿಸುವಿ.

ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು.

ಯೆಹೋವನ ಮಾರ್ಗಗಳು ಸತ್ಯವಾದವುಗಳು;

ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.

Source notes (2)
  1. Footnote ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು. ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.
  2. Footnote ಅದರ ನೆರಳನ್ನು ಆಶ್ರಯಿಸಿರುವವರು ಅವರು ಯೆಹೋವನ ನೆರಳಿನಲ್ಲಿ ವಾಸಿಸುವರು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.