Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಯಾಕೋ 2

ಪಕ್ಷಪಾತವನ್ನು ಕುರಿತದ್ದು

ನನ್ನ ಸಹೋದರರೇ, 1ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು 2ಪಕ್ಷಪಾತಿಗಳಾಗಿರಬಾರದು. ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ 3“ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, ನೀವು ನಿಮ್ಮ ನಿಮ್ಮಲ್ಲಿ 4ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?

ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು 5ಈ ಲೋಕದಲ್ಲಿನ ಬಡವರನ್ನು 6ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, 7ತನ್ನನ್ನು ಪ್ರೀತಿಸುವವರಿಗೆ 8ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ 9ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ 10ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ 11ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?

ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ 12“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ. ಒಂದು ವೇಳೆ ಅದನ್ನು ಬಿಟ್ಟು ನೀವು 13ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ. ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ 14ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ. ಏಕೆಂದರೆ 15ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ. ನೀವು 16ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ. ಏಕೆಂದರೆ 17ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ನಂಬಿಕೆಯೊಂದೇ ಸಾಲದು ಅದರಂತೆ ನಡೆಯಬೇಕೆಂಬ ಬೋಧನೆ

ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು 18ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? ನಿಮ್ಮಲ್ಲಿ 19ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು 20ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು. ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” 21ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. 22ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ. 23ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ 24ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ. ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ 25ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು 26ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ 27ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ. 28“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು 29ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು. ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ. ಅದೇ ರೀತಿಯಾಗಿ ವೇಶ್ಯೆಯಾದ 30ರಾಹಾಬಳು 31ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ? ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

Source notes (31)
  1. Footnote 1 ಕೊರಿ 2:8,
  2. Footnote ವ. 9; ಯಾಜ 19:15; ಧರ್ಮೋ 1:17; 10:17; ಜ್ಞಾ. 24:23; ರೋಮಾ. 2:11; ಎಫೆ 6:9:
  3. Footnote ಜ್ಞಾ. 18:23:
  4. Footnote ಯೋಹಾ 7:24:
  5. Footnote 1 ಕೊರಿ 1:27,28; ಯೋಬ. 34:19:
  6. Footnote 2 ಕೊರಿ 8:9; ಪ್ರಕ 2:9; ಲೂಕ 12:21:
  7. Footnote ಯಾಕೋಬ. 1:12:
  8. Footnote ಮತ್ತಾ 5:3; ಲೂಕ 6:20; 12:32:
  9. Footnote 1 ಕೊರಿ 11:22:
  10. Footnote ಅ. ಕೃ. 8:3; 16:19; 18:12:
  11. Footnote ಯೆಶಾ 63:19; ಆಮೋ. 9:12; ಅ. ಕೃ. 15:17:
  12. Footnote ಯಾಜ 19:18:
  13. Footnote ವ. 1:
  14. Footnote ಮತ್ತಾ 5:19; ಗಲಾ. 3:10:
  15. Footnote ವಿಮೋ 20:13,14:
  16. Footnote ಅಥವಾ, ಬಿಡುಗಡೆಯಾದವರಿಗೆ ಇರುವ. ಯಾಕೋಬ. 1:25:
  17. Footnote ಯೋಬ. 22:6-11; ಕೀರ್ತ 18:25; ಜ್ಞಾ. 21:13; ಲೂಕ 6:38:
  18. Footnote ಯಾಕೋಬ. 1:22:
  19. Footnote ಯೋಬ. 31:19,20:
  20. Footnote 1 ಯೋಹಾ 3:17,18:
  21. Footnote ರೋಮಾ. 3:28; ಇಬ್ರಿ. 11:33:
  22. Footnote ಮತ್ತಾ 7:16,17; ಗಲಾ. 5:6:
  23. Footnote ಧರ್ಮೋ 6:4; 1 ಕೊರಿ 8:6:
  24. Footnote ಮತ್ತಾ 8:29; ಲೂಕ 4:33,34; ಅ. ಕೃ. 16:17; 19:15:
  25. Footnote ಆದಿ 22:9,12,16-18
  26. Footnote ಇಬ್ರಿ. 11:17:
  27. Footnote 1 ಥೆಸ. 1:3:
  28. Footnote ಆದಿ 15:6; ರೋಮಾ. 4:3; ಗಲಾ. 3:6:
  29. Footnote 2 ಪೂರ್ವ 20:7; ಯೆಶಾ 41:8:
  30. Footnote ಇಬ್ರಿ. 11:31:
  31. Footnote ಯೆಹೋ. 2:1-22; 6:23:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.