Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಯಾಕೋ 3

ನಾಲಿಗೆಯನ್ನು ಹತೋಟಿಯಲ್ಲಿಡುವ ವಿಷಯ

1

ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ. 2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. 3ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ 4ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ. ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ 5ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ. ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ 6ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. 7ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. 8ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.

ಸಕಲ ಜಾತಿಯ ಮೃಗ, ಪಕ್ಷಿ, 9ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. 10ಮರಣಕರವಾದ ವಿಷದಿಂದ ತುಂಬಿದೆ. ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ 11ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ? ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.

ನಿಜವಾದ ಜ್ಞಾನದ ಲಕ್ಷಣಗಳು

ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು 12ಒಳ್ಳೆಯ ನಡತೆಯಿಂದ, 13ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ. ಆದರೆ 14ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. 15ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, 16ದೆವ್ವಗಳಿಗೆ ಸಂಬಂಧಪಟ್ಟದ್ದು. ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು. ಆದರೆ 17ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ 18ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, 19ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, 20ಪ್ರಾಮಾಣಿಕವಾದ್ದದು ಆಗಿದೆ. 21ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು 22ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

Source notes (22)
  1. Footnote ಮತ್ತಾ 23:8; ರೋಮಾ. 2:20,21; 1 ತಿಮೊ. 1:7:
  2. Footnote 1 ಅರಸು. 8:46; ಜ್ಞಾ. 20:9; ಪ್ರಸಂಗಿ. 7:20:
  3. Footnote ಮತ್ತಾ 5:22; 12:37:
  4. Footnote ಯಾಕೋಬ. 1:26:
  5. Footnote ಕೀರ್ತ 32:9:
  6. Footnote ಕೀರ್ತ 12:3,4; 73:8,9
  7. Footnote ಕೀರ್ತ 120:2-4; ಜ್ಞಾ. 16:27:
  8. Footnote ಮತ್ತಾ 15:18:
  9. Footnote ಸರೀಸೃಪಗಳು
  10. Footnote ಕೀರ್ತ 140. 3; ರೋಮಾ. 3:13
  11. Footnote ಆದಿ 1:26:
  12. Footnote ಯಾಕೋಬ. 2:18:
  13. Footnote ಯಾಕೋಬ. 1:21:
  14. Footnote ವ. 16; 2 ಕೊರಿ 12:20; ಗಲಾ. 5:20; ಫಿಲಿ. 1:17; 2:3:
  15. Footnote ಯಾಕೋಬ. 1:17:
  16. Footnote 2 ಥೆಸ. 2:9,10; 1 ತಿಮೊ. 4:1; ಪ್ರಕ 2:24:
  17. Footnote 1 ಕೊರಿ 2:6,7:
  18. Footnote ಇಬ್ರಿ. 12:11:
  19. Footnote ಲೂಕ 6:36:
  20. Footnote ರೋಮಾ. 12:9:
  21. Footnote ಮತ್ತಾ 5:9:
  22. Footnote ಗಲಾ. 6:7,8:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.