Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಯಾಕೋ 4

ಜಗಳಗಂಟಿತನ, ಪ್ರಾಪಂಚಿಕ ಬುದ್ಧಿಯ ವಿಷಯವಾಗಿ ಎಚ್ಚರಿಕೆ

ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ 1ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ 2ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ. 3ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ 4ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. 5ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? 6ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “7ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು 8ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. 9ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, 10ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, 11ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. 12ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ. 13ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.

ಸಹೋದರರೇ, 14ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ 15ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. 16ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ 17ನಾಶಮಾಡುವುದಕ್ಕೂ ಸಮರ್ಥನು. 18ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು? 19

“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ. ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? 20ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು 21“ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು. ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. 22ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ. ಹೀಗಿರುವುದರಿಂದ 23ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.

Source notes (23)
  1. Footnote ಅಥವಾ. ದಂಡಿಳಿದಿರುವ. ರೋಮಾ. 7:23; 1 ಪೇತ್ರ. 2:11:
  2. Footnote 1 ಯೋಹಾ 5:14:
  3. Footnote ಯೆಶಾ 54:5; ಯೆರೆ 2:20:
  4. Footnote ಯೋಹಾ 15:19; 1 ಯೋಹಾ 2:15. ಮತ್ತಾ 6:24:
  5. Footnote 1 ಕೊರಿ 6:19; 2 ಕೊರಿ 6:16:
  6. Footnote ಯೆಶಾ 54:7, 8; ಮತ್ತಾ 13:12:
  7. Footnote ಜ್ಞಾ. 3:34; 1 ಪೇತ್ರ. 5:5; ಕೀರ್ತ 138:6; ಮತ್ತಾ 23:12; 2 ಕೊರಿ 7:6:
  8. Footnote 1 ಪೇತ್ರ. 5:8, 9; ಎಫೆ 4:27; 6:11:
  9. Footnote 2 ಪೂರ್ವ 15:2; ಜೆಕ. 1:3; ಮಲಾ. 3:7; ಲೂಕ 15:20:
  10. Footnote ಯೆಶಾ 1:16:
  11. Footnote ಯೆರೆ 4:14:
  12. Footnote ಮತ್ತಾ 5:4:
  13. Footnote ವ. 6; ಯೆಶಾ 57:15. ಮತ್ತಾ 23:12; ಲೂಕ 14:11; 18:14; 1 ಪೇತ್ರ. 5:5, 6:
  14. Footnote 2 ಕೊರಿ 12:20; 1 ಪೇತ್ರ. 2:1; ಯಾಕೋಬ 5:9:
  15. Footnote ಮತ್ತಾ 7:1; ಲೂಕ 6:37; ರೋಮಾ. 14:13; 1 ಕೊರಿ 4:5:
  16. Footnote ಯೆಶಾ 33:22; ಯಾಕೋಬ. 5:9:
  17. Footnote ಮತ್ತಾ 10:28:
  18. Footnote ರೋಮಾ. 14:4:
  19. Footnote ಜ್ಞಾ. 27:1; ಲೂಕ 12:18-20:
  20. Footnote ಕೀರ್ತ 102:3; ಯೋಬ. 7:7:
  21. Footnote ಅ. ಕೃ. 18:21:
  22. Footnote 1 ಕೊರಿ 5:6:
  23. Footnote ಯೋಹಾ 9:41; 15:22, 24; ಲೂಕ 12:47, 48; 2 ಪೇತ್ರ. 2:21:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.