ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯಾಕೋ 5
ಐಶ್ವರ್ಯವಂತರ ನಡತೆಯ ಬಗ್ಗೆ ಎಚ್ಚರಿಕೆ
ಐಶ್ವರ್ಯವಂತರೇ, 1ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. 2ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. 3ಅಂತ್ಯಕಾಲ ಬಂದರೂ ಸಂಪತ್ತನ್ನು 4ಕೂಡಿಸಿ ಇಟ್ಟುಕೊಂಡಿದ್ದೀರಿ. ಇಗೋ, 5ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು6 ಪೈರು ಕೊಯ್ದದವರ ಕೂಗು 7ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ. ಭೂಲೋಕದಲ್ಲಿ ನೀವು 8ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ. ನೀವು ನೀತಿವಂತನನ್ನು ಖಂಡಿಸಿ 9ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.
ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು
ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು 10ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. ನೀವೂ ತಾಳ್ಮೆಯಿಂದಿರಿ, 11ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ 12ಕರ್ತನ ಬರೋಣವು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ 13ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, 14ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ. ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ 15ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು 16ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ 17ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ 18ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
ನಂಬಿಕೆಯ ಪ್ರಾರ್ಥನೆ ಕುರಿತದ್ದು
ಮುಖ್ಯವಾಗಿ ನನ್ನ ಸಹೋದರರೇ, 19ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, 20ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ 21ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ 22ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ 23ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. 24ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ. ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, 25ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು 26ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
ನನ್ನ ಸಹೋದರರೇ, 27ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ 28ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ; ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ 29ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
Source notes (29)
- Footnote ಲೂಕ 6:24; ಜ್ಞಾ. 11:28; ಆಮೋ. 6:1; 1 ತಿಮೊ. 6:9:
- Footnote ಮತ್ತಾ 6:19, 20:
- Footnote ಯಾಕೋಬ 5:8, 9:
- Footnote ಮತ್ತಾ 6:19; ಲೂಕ 12:21; ರೋಮಾ. 2:5:
- Footnote ಯಾಜ 19:13:
- Footnote ಧರ್ಮೋ 24:15:
- Footnote ರೋಮಾ. 9:29:
- Footnote ಲೂಕ 16:19:
- Footnote ಯಾಕೋಬ 4:2:
- Footnote ಧರ್ಮೋ 11:14:
- Footnote 1 ಥೆಸ. 3:13:
- Footnote 1 ಪೇತ್ರ. 4:7; ರೋಮಾ. 13:11, 12; ಫಿಲಿ. 4:5; ಇಬ್ರಿ. 10:25, 37:
- Footnote ಮತ್ತಾ 7:1:
- Footnote 1 ಪೇತ್ರ. 4:5; ಮತ್ತಾ 24:33; ಮಾರ್ಕ 13:29; 1 ಕೊರಿ 4:5; ಪ್ರಕ 22:12:
- Footnote ಮತ್ತಾ 5:12; 23:34; ಅ. ಕೃ. 7:52; ಇಬ್ರಿ. 11:32,38.
- Footnote ಯೋಬ. 1:21, 22; 2:10:
- Footnote ಯೋಬ. 42:10, 12:
- Footnote ವಿಮೋ 34:6:
- Footnote ಮತ್ತಾ 5:34:
- Footnote ಕೊಲೊ 3:16:
- Footnote ಮಾರ್ಕ 6:13; ಮಾರ್ಕ 16:18:
- Footnote ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20:
- Footnote ಅ. ಕೃ. 19:18:
- Footnote ಆದಿ 18:23-32; 20:17; ಅರಣ್ಯ 11:2; 1 ಅರಸು. 13:6; 17:22; 2 ಅರಸು. 4:33; 19:15-20; 20:2, 5; ಯೋಬ. 42:8; ಜ್ಞಾ. 15:29:
- Footnote 1 ಅರಸು. 17:1; 18:1:
- Footnote ಲೂಕ 4:25:
- Footnote ಮತ್ತಾ 18:15; ಗಲಾ. 6:1:
- Footnote ದಾನಿ. 12:3; ಮಲಾ. 2:6:
- Footnote ರೋಮಾ. 11:14:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.