ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೋಬ 25
ಬಿಲ್ದದನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ
ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು,
ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
ಆತನ ಸೈನ್ಯಗಳಿಗೆ ಲೆಕ್ಕವಿದೆಯೋ?
ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?
ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ?
ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ,
ನಕ್ಷತ್ರಗಳೂ ಶುದ್ಧವಲ್ಲ.
ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು!
ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.