ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಯೂದ 1
ಪೀಠಿಕೆ
ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ 1ದೇವರಲ್ಲಿ ಪ್ರಿಯರಾದವರಿಗೆ, 2ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ, ನಿಮಗೆ 3ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.
ದುರ್ಬೋಧಕರು
ಪ್ರಿಯರೇ, 4ನಮಗೆ 5ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು 6ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು 7ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. 8ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು 9ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ 10ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ 11ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. 12ಸೊದೋಮ್ ಗೊಮೋರ ಪಟ್ಟಣಗಳವರೂ, 13ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, 14ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ. ಆದರೂ 15ಪ್ರಧಾನ ದೇವದೂತನಾದ 16ಮೀಕಾಯೇಲನು 17ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, 18ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, 19“ಕರ್ತನು ನಿನ್ನನ್ನು ಗದರಿಸಲಿ” ಎಂದನು. ಆದರೆ ಈ ಜನರು 20ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅವರ ಗತಿಯನ್ನು ಏನೆಂದು ಹೇಳಲಿ? ಇವರು 21ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ 22ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, 23ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ. ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, 24ನಿಮ್ಮ 25ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. 26ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು 27ಗಾಳಿಯಿಂದ ಬಡಿಸಿಕೊಂಡು ಹೋಗುವ 28ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, 29ಸಂಪೂರ್ಣವಾಗಿ ಸತ್ತ, 30ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು. 31ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ 32ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ 33ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.
ಇಂಥವರ ವಿಷಯದಲ್ಲೇ 34ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, 35“ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು, 36ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.
ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, 37ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, 38ಬಂಡಾಯಿಕೊಚ್ಚಿಕೊಳ್ಳುವವರು, 39ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.
ಎಚ್ಚರಿಕೆಗಳೂ ಪ್ರಬೋಧನೆಗಳೂ
ಪ್ರಿಯರೇ, 40ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ. 41“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು. ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, 42ಪ್ರಾಕೃತ ಮನುಷ್ಯರೂ, 43ದೇವರಾತ್ಮ ಇಲ್ಲದವರೂ ಆಗಿದ್ದಾರೆ. ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ 44ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, 45ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ. 46ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, 47ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ, 48ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು 49ಭಯಪಡುತ್ತಾ ಕರುಣಿಸಿರಿ. 50ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
ಅಂತ್ಯಾಶೀರ್ವಾದ
ಮುಗ್ಗರಿಸದಂತೆ 51ನಿಮ್ಮನ್ನು ಕಾಪಾಡಿಕೊಳ್ಳುತ್ತಾ, 52ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು 53ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ 54ಶಕ್ತನಾಗಿರುವ, ನಮ್ಮ ರಕ್ಷಕನಾದ 55ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, 56ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.
Source notes (56)
- Footnote 1 ಥೆಸ. 1:4; 2 ಥೆಸ. 2:13:
- Footnote ಯೋಹಾ 17:11, 15; 1 ಥೆಸ. 5:23:
- Footnote 2 ಯೋಹಾ 3:
- Footnote ತೀತ. 1:4:
- Footnote ಅಥವಾ, ಹಂಚಿಕೊಳ್ಳುವ.
- Footnote 1 ತಿಮೊ. 6:12; 2 ತಿಮೊ. 4:7; ಲೂಕ 13:24; 1 ಕೊರಿ 9:25; ಫಿಲಿ. 1:27:
- Footnote ತೀತ. 1:16; 2 ಪೇತ್ರ. 2:1; 1 ಯೋಹಾ 2:22:
- Footnote 1 ಪೇತ್ರ. 2:8:
- Footnote 2 ಪೇತ್ರ. 1:12:
- Footnote ಅರಣ್ಯ 14:29, 37; 26:64, 65; ಕೀರ್ತ 106:26; ಇಬ್ರಿ. 3:17-19:
- Footnote 2 ಪೇತ್ರ. 2:4. ಪ್ರಕ 20:2:
- Footnote ಆದಿ 19:24:
- Footnote ಆದಿ 10:19; 14:2, 8; ಧರ್ಮೋ 29:23; ಹೋಶೇ. 11:8:
- Footnote 2 ಪೇತ್ರ. 2:10. ಸಲಿಂಗಕಾಮಿಗಳಾಗಿದ್ದರು.
- Footnote 1 ಥೆಸ. 4:16:
- Footnote ದಾನಿ. 10:13; 12:1; ಪ್ರಕ 12:7:
- Footnote ಧರ್ಮೋ 34:6:
- Footnote 2 ಪೇತ್ರ. 2:11:
- Footnote ಜೆಕ. 3:2:
- Footnote 2 ಪೇತ್ರ. 2:12:
- Footnote ಆದಿ 4:5-8:
- Footnote ಅರಣ್ಯ 31:15, 16; 2 ಪೇತ್ರ. 2:15:
- Footnote ಅರಣ್ಯ 16:1-35:
- Footnote ಅಥವಾ, ಕಳಂಕಕ್ಕೆ ಕಾರಣರಾಗಿದ್ದು.
- Footnote 2 ಪೇತ್ರ. 2:13:
- Footnote ಯೆಹೆ. 34:2, 8, 10:
- Footnote ಎಫೆ 4:14; ಇಬ್ರಿ. 13:9:
- Footnote 2 ಪೇತ್ರ. 2:17:
- Footnote ಎರಡು ಸಾರಿ ಸತ್ತ.
- Footnote ಮತ್ತಾ 15:13:
- Footnote ಫಿಲಿ. 3:19:
- Footnote ಯೆಶಾ 57:20:
- Footnote 2 ಪೇತ್ರ. 2:17:
- Footnote ಆದಿ 5:18:
- Footnote ಧರ್ಮೋ 33:2; ದಾನಿ. 7:10; ಜೆಕ. 14:5; ಮಾರ್ಕ 8:38; 1 ಥೆಸ. 3:13; 2 ಥೆಸ. 1:7:
- Footnote 2 ಪೇತ್ರ. 2:5:
- Footnote 2 ಪೇತ್ರ. 2:10:
- Footnote 2 ಪೇತ್ರ. 2:18:
- Footnote ಯಾಜ 19:5; ಧರ್ಮೋ 10:17:
- Footnote 2 ಪೇತ್ರ. 3:2:
- Footnote 2 ಪೇತ್ರ. 3:3:
- Footnote 1 ಕೊರಿ 2:14:
- Footnote ರೋಮಾ. 8:9; ಫಿಲಿ. 3:3:
- Footnote ಕೊಲೊ 2:7:
- Footnote ಎಫೆ 6:18; ರೋಮಾ. 8:26:
- Footnote ತೀತ. 2:13; 2 ಪೇತ್ರ. 3:12:
- Footnote 2 ಕೊರಿ 13:14; ಅ. ಕೃ. 13:43
- Footnote ಆಮೋ. 4:1; ಜೆಕ. 3:2:
- Footnote 2 ಕೊರಿ 5:11:
- Footnote ಪ್ರಕ 3:4; ಜೆಕ. 3:4:
- Footnote ಯೋಹಾ 17:12:
- Footnote ಕೊಲೊ 1:22; 1 ಪೇತ್ರ. 4:13:
- Footnote ಎಫೆ 1:4; 5:27; ಫಿಲಿ. 2, 15; ಪ್ರಕ 14:5:
- Footnote ರೋಮಾ. 16:25; ಎಫೆ 3:20:
- Footnote ಯೋಹಾ 5:44; 1 ತಿಮೊ. 1:17:
- Footnote ರೋಮಾ. 11:36:
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.