Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಫಿಲಿಪ್ಪಿ 2

ಯೇಸುವಿನ ದೀನತೆಯನ್ನು ಅನುಸರಿಸಬೇಕು

ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, 1ಪವಿತ್ರಾತ್ಮನ ಅನ್ಯೋನ್ಯತೆ, 2ಕಾರುಣ್ಯದಯಾರಸಗಳು ಉಂಟಾಗುವುದಾದರೆ, ನೀವೆಲ್ಲರು 3ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ 4ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. 5ಸ್ವಾರ್ಥದಿಂದಾಗಲಿ, 6ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, 7ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. 8ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. 9ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಆತನು 10ದೇವಸ್ವರೂಪನಾಗಿದ್ದರೂ,

ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ

ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 11

ತನ್ನನ್ನು ಬರಿದು ಮಾಡಿಕೊಂಡು 12

ದಾಸನ ರೂಪವನ್ನು ಧರಿಸಿಕೊಂಡು 13

ಮನುಷ್ಯರಿಗೆ ಸಮನಾದನು.

ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ಆತನು ತನ್ನನ್ನು ತಗ್ಗಿಸಿಕೊಂಡು 14ಮರಣವನ್ನು 15ಅಂದರೆ

ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 16

ಈ ಕಾರಣದಿಂದ 17ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, 18

ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

ಆದ್ದರಿಂದ 19ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ 20

ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,

ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು

ಯೇಸು ಕ್ರಿಸ್ತನನ್ನು 21ಕರ್ತನೆಂದು ಅರಿಕೆಮಾಡುವುದು.

ನಕ್ಷತ್ರಗಳಂತೆ ಪ್ರಕಾಶಿಸುವುದು

ಹೀಗಿರುವಲ್ಲಿ ನನ್ನ ಪ್ರಿಯರೇ, 22ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ಯಾಕೆಂದರೆ 23ದೇವರೇ ತನ್ನ 24ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು 25ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ 26ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ 27ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ 28ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ 29ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ 30ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು. 31ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ 32ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ. ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ.

ಎಪಫ್ರೊದೀತನ್ನೂ ತಿಮೊಥೆಯನ್ನೂ

ಆದರೆ ನಾನು 33ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು. 34ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. 35ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. 36ಮಗನು ತಂದೆಗೆ ಹೇಗೋ 37ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು. ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ. 38ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. 39

ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು. ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ. ಹೀಗಿರಲಾಗಿ 40ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ 41ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. 42ಅಂಥವರನ್ನು ಮಾನ್ಯರೆಂದೆಣಿಸಿರಿ.

Source notes (42)
  1. Footnote ಅ. ಕೃ. 15:2
  2. Footnote ಕೊಲೊ 3:12
  3. Footnote ರೋಮಾ. 12:16
  4. Footnote ಯೋಹಾ 3:29; 15:11
  5. Footnote ಫಿಲಿ. 1:17
  6. Footnote ಗಲಾ 5:26
  7. Footnote ಎಫೆ 4:2; 5:21; ರೋಮಾ. 12:10
  8. Footnote ರೋಮಾ. 15:2
  9. Footnote ರೋಮಾ. 15:3
  10. Footnote ಯೋಹಾ 5:18; 10:33
  11. Footnote 2 ಕೊರಿ 8:9; 13:4
  12. Footnote ಯೆಶಾ 42:1; ಮತ್ತಾ 20:28
  13. Footnote ರೋಮಾ. 8:3; ಗಲಾ. 4:4; ಯೋಹಾ 1:14
  14. Footnote ಇಬ್ರಿ. 5:8; ಮತ್ತಾ 26:39; ಯೋಹಾ 10:18; ರೋಮಾ. 5:19
  15. Footnote ಇಬ್ರಿ. 12:2
  16. Footnote ಯೋಹಾ 10:17; ಯೆಶಾ 52:13; 53:12; ಇಬ್ರಿ. 2:9
  17. Footnote ಅ. ಕೃ. 2:33; ಮತ್ತಾ 28:18
  18. Footnote ಎಫೆ 1:21; ಇಬ್ರಿ. 1:4
  19. Footnote ಪ್ರಕ 5:13; ಎಫೆ 1:10
  20. Footnote ಯೆಶಾ 45:23; ರೋಮಾ. 14:11
  21. Footnote ರೋಮಾ. 14:9; ಯೋಹಾ 13:13
  22. Footnote ಫಿಲಿ. 1:5; 4:15
  23. Footnote 1 ಕೊರಿ 12:6; 15:10; ಇಬ್ರಿ. 13:21
  24. Footnote 1 ತಿಮೊ. 2:4
  25. Footnote ಧರ್ಮೋ 32:5; ಮತ್ತಾ 17:17; ಲೂಕ 9:41
  26. Footnote ಮತ್ತಾ 5:45; ಎಫೆ 5:1
  27. Footnote ಅ. ಕೃ. 5:20
  28. Footnote ಮತ್ತಾ 5:14,16; ತೀತ 2:10
  29. Footnote ಗಲಾ. 2:2; 4:11; 1 ಥೆಸ. 3:5
  30. Footnote 2 ಕೊರಿ 1:14
  31. Footnote ರೋಮಾ. 15:16
  32. Footnote 2 ತಿಮೊ. 4:6; 2 ಕೊರಿ 12:15
  33. Footnote 1 ಕೊರಿ 4:17; 1 ಥೆಸ. 3:2
  34. Footnote 1 ಕೊರಿ 16:10
  35. Footnote 2 ತಿಮೊ. 3:2; 1 ಕೊರಿ 10:24
  36. Footnote 1 ಕೊರಿ 4:17; 1 ತಿಮೊ. 1:2; 1 ತಿಮೊ. 1:2
  37. Footnote 2 ತಿಮೊ. 3:10
  38. Footnote ಫಿಲಿ. 1:25; ಫಿಲೆ. 22
  39. Footnote ಫಿಲಿ. 4:18
  40. Footnote ಫಿಲಿ. 4:10
  41. Footnote ಅ. ಕೃ. 20:24
  42. Footnote 1 ಕೊರಿ 16:18; 1 ಥೆಸ. 5:12,13; 1 ತಿಮೊ. 5:17

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.