Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 101

ರಾಜಶ್ರೇಷ್ಠನ ಪ್ರತಿಜ್ಞೆ

ದಾವೀದನ ಕೀರ್ತನೆ.

ಕೀರ್ತ 15; 24

ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;

ಯೆಹೋವನೇ, ನಿನ್ನನ್ನು ಕೊಂಡಾಡುವೆನು.

ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;

ನನಗೆ ಯಾವಾಗ ದರ್ಶನಕೊಡುವಿ?

ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.

ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;

ದುರಾಚಾರವನ್ನು ಹಗೆಮಾಡುತ್ತೇನೆ,

ಅದರ ಗೊಡವೆಯೇ ನನಗೆ ಬೇಡ.

ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;

ಕೆಟ್ಟತನವನ್ನು ಅರಿಯದಿರುವೆನು.

ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;

ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.

ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;

ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು,

ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.

ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;

ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,

ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.