Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 111

ದೇವಸ್ತುತಿ

ಕೀರ್ತ 112

ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು;

ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ,

ಮನಃಪೂರ್ವಕವಾಗಿ ಕೀರ್ತಿಸುವೆನು.

ಯೆಹೋವನ ಕೃತ್ಯಗಳು ಮಹತ್ತಾದವುಗಳು;

ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.

ಆತನ ಕಾರ್ಯವು ಘನ, ಮಾನಗಳುಳ್ಳದ್ದು;

ಆತನ ನೀತಿಯು ಸದಾಕಾಲವೂ ಇರುವುದು.

ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ.

ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.

ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ;

ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ

ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕ

ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.

ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ;

ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.

ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು.

ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.

ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ;

ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ;

ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.

ಯೆಹೋವನ ಭಯವೇ ಜ್ಞಾನಕ್ಕೆ ಮೂಲ;

ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು.

ಆತನ ಸ್ತುತಿಯು ನಿರಂತರವಾದದ್ದು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.