Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 112

ಭಕ್ತರ ಧನ್ಯತೆ

ಕೀರ್ತ 111

ಯೆಹೋವನಿಗೆ ಸ್ತೋತ್ರ!

ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,

ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.

ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು;

ನೀತಿವಂತನ ವಂಶವು ಶುಭಹೊಂದುವುದು.

ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು;

ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.

ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು;

ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.

ದಯಾಳುವಾಗಿ ಧನಸಹಾಯ ಮಾಡುವವನೂ,

ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

ಅವನು ಎಂದಿಗೂ ಕದಲುವುದಿಲ್ಲ;

ನೀತಿವಂತನನ್ನು ಯಾವಾಗಲೂ ಸ್ಮರಿಸುವರು.

ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ;

ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ,

ಅವನ ಮನಸ್ಸು ಸ್ಥಿರವಾಗಿರುವುದು.

ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ

ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.

ಬಡವರಿಗೆ ಉದಾರವಾಗಿ ಕೊಡುತ್ತಾನೆ;

ಅವನ ನೀತಿಯ ಫಲವು ಸದಾಕಾಲವೂ ಇರುವುದು. 1

ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

ದುಷ್ಟನು ನೋಡಿ ವ್ಯಥೆಪಡುವನು;

ಅವನು ಹಲ್ಲುಕಡಿಯುತ್ತಾ ನಾಶವಾಗುವನು.

ದುಷ್ಟರ ನಿರೀಕ್ಷೆಯು ಭಂಗವಾಗುವುದು.

Source notes (1)
  1. Footnote ಅಥವಾ ಅವನು ಬಲಿಷ್ಠನಾಗುವನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.