Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 12

ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.

ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ.

ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ,

ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ;

ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ.

ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ;

ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು.

ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು.

ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

ಯೆಹೋವನ ಮಾತುಗಳು ಯಥಾರ್ಥವಾದವುಗಳೇ;

ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ,

ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

ಯೆಹೋವನೇ, ನೀನು 1ನಮ್ಮನ್ನು ನೋಡಿದ್ದಿ,

ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

Source notes (1)
  1. Footnote ಅಥವಾ ಅವರನ್ನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.