Skip to content
BibleKenya

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

ಕೀರ್ತ 120

ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ

ಯಾತ್ರಾಗೀತೆ.

ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;

ಆತನು ಸದುತ್ತರವನ್ನು ದಯಪಾಲಿಸಿದನು.

ಯೆಹೋವನೇ, ಸುಳ್ಳು ಬಾಯಿಯೂ,

ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು?

ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

ಶೂರನ1 ಹದವಾದ ಬಾಣಗಳನ್ನೂ,

ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

ಅಯ್ಯೋ, ನಾನು ಮೇಷೆಕಿನವರಲ್ಲಿ2 ತಂಗಬೇಕಲ್ಲಾ!

ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!

ಸಮಾಧಾನವನ್ನು ದ್ವೇಷಿಸುವವರೊಳಗೆ,

ಇದ್ದು ಇದ್ದು ಸಾಕಾಯಿತು.

ನಾನು ಸಮಾಧಾನಪ್ರಿಯನು;

ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

Source notes (2)
  1. Footnote ಶೂರನ ಬಲಿಷ್ಠನ.
  2. Footnote ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.